×
Ad

ಡಿಜಿಪಿ ಪ್ರವೀಣ್‍ ಸೂದ್‍ಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದ ಕೆಎಟಿ

Update: 2021-02-18 19:40 IST

ಬೆಂಗಳೂರು, ಫೆ.18: ರಾಜ್ಯದಲ್ಲಿನ ಮುಖ್ಯ ಪೇದೆ, ಎಎಸ್‍ಐಗಳ ಬಡ್ತಿಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ)ರಿಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.

ರಾಜ್ಯದಲ್ಲಿನ ಮುಖ್ಯಪೇದೆ ಹಾಗೂ ಎಎಸ್‍ಐಗಳ ಭಡ್ತಿಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕೆಎಟಿ ಭಡ್ತಿ ಸರಿಪಡಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶಿಸಿತ್ತು.

ಕೆಎಟಿ ಆದೇಶ ನೀಡಿದ್ದರೂ ಅದಕ್ಕೆ ಮನ್ನಣೆ ನೀಡದೆ ಪೊಲೀಸ್ ಇಲಾಖೆ ಭಡ್ತಿಯಲ್ಲಿ ಡಿಜಿಪಿ ನಿರ್ಲಕ್ಷ್ಯ ತೋರಿದ್ದರು ಎನ್ನಲಾಗಿದೆ. ಈ ಕುರಿತಂತೆ ವಿಚಾರಣೆ ನಡೆಸಿದ ಕೆಎಟಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‍ಸೂದ್‍ಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News