×
Ad

ಫೆ. 19ರಿಂದ ಕಾಜೂರು ಉರೂಸ್‌

Update: 2021-02-18 22:11 IST

ಬೆಳ್ತಂಗಡಿ:  ಕಾಜೂರು ಉರೂಸ್ ಮಹಾಸಂಭ್ರಮಕ್ಕೆ ಫೆ. 19ರಂದು ಚಾಲನೆ ದೊರೆಯಲಿದೆ.

ಕಾಜೂರು ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ಮತ್ತು ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಸಯ್ಯಿದ್ ಕೂರತ್ ತಂಙಳ್ ಅವರ ಮಾರ್ಗದರ್ಶನದಲ್ಲಿ ನಡೆಯುವ ಕಾರ್ಯಕ್ರಮದ ನೇತೃತ್ವವನ್ನು ಸಯ್ಯಿದ್ ಕಾಜೂರು ತಂಙಳ್ ವಹಿಸಲಿದ್ದಾರೆ.

ಶುಕ್ರವಾರದ ಜುಮಾ ನಮಾಝ್‌ನ ಬಳಿಕ ಕಾಜೂರು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಧ್ವಜಾರೋಹಣ ನಡೆಸಲಿದ್ದಾರೆ‌.
ಕೂರತ್ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಳ್ತಂಗಡಿ ತಾಲೂಕು ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಸಾದಾತ್ ತಂಙಳ್ ಉದ್ಘಾಟನೆ ನಡೆಸಲಿದ್ದಾರೆ. ಉರೂಸ್ ಪ್ರಯುಕ್ತ ಪ್ರತಿದಿನ‌ ನಡೆಯುವ ಧಾರ್ಮಿಕ ಉಪನ್ಯಾಸ ಮಾಲಿಕೆಯನ್ನು ಕಾಜೂರು ತಂಙಳ್ ಉದ್ಘಾಟಿಸಲಿದ್ದಾರೆ.

‌ಫೆ. 25 ರಂದು‌ ಖಾಝಿ ಮಾಣಿ ಉಸ್ತಾದ್ ನೇತೃತ್ವದಲ್ಲಿ ನಡೆಯುವ ದಿಕ್ರ್ ಮಜ್ಲಿಸ್  ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಉಸ್ತಾದ್ ಆಗಮಿಸಲಿದ್ದಾರೆ. 

ಸಮಾರಂಭದಲ್ಲಿ  ವಿದ್ವಾಂಸರುಗಳು, ಸಯ್ಯಿದ್ ಕಾಜೂರು ತಂಙಳ್, ಸಯ್ಯಿದ್ ಜಿಫ್ರಿ ತಂಙಳ್ ಬೆಳ್ತಂಗಡಿ, ‌ಡಾ. ಕಾವಳಕಟ್ಟೆ ಹಝ್ರತ್, ಅನೇಕ ಸಯ್ಯಿದರುಗಳು, ಉಲಮಾಗಳು, ಸಾಮಾಜಿಕ ಧಾರ್ಮಿಕ ನಾಯಕರುಗಳು ಭಾಗವಹಿಸಲಿದ್ದಾರೆ.

ಫೆ. 28 ರಂದು ಸಂಜೆ ಸರ್ವಧರ್ಮೀಯರ ಸೌಹಾರ್ದ ಸಮಾರಂಭ ನಡೆಯಲಿದ್ದು, ಕುಂಬೋಳ್ ತಂಙಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸದಸ್ಯ ಎನ್.ಕೆ.ಎಮ್ ಶಾಫಿ ಸಅದಿ ಬೆಂಗಳೂರು, ಡಾ. ಅಬ್ದುಲ್ ರಶೀದ್ ಝೈನಿ ಸಖಾಫಿ, ಎಂಎಲ್‌ಸಿ ಬಿ.ಎಮ್ ಫಾರೂಕ್  ಸಹಿತ ಹಲವಾರು ಧಾರ್ಮಿಕ, ರಾಜಕೀಯ, ಸಾಮಾಜಿಕ ನೇತಾರರು ಹಾಗೂ ಸಚಿವರುಗಳು, ಸಂಸದರು, ಶಾಸಕರುಗಳು ಭಾಗವಹಿಸಲಿದ್ದಾರೆ.

ರಾತ್ರಿ ಉರೂಸ್ ಸಮಾರೋಪ ನಡೆಯಲಿದೆ. ಉರೂಸ್ ಕೊನೆಯದಾಗಿ ಸಾರ್ವಜನಿಕರಿಗೆ ಮಹಾ ಅನ್ನದಾನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News