ಬಿಟ್ ಕಾಯಿನ್ ಕಿಯೋಸ್ಕ್ ಸ್ಥಾಪಿಸಿದ್ದವರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Update: 2021-02-18 18:05 GMT

ಬೆಂಗಳೂರು, ಫೆ.18: ಬಿಟ್ ಕಾಯಿನ್ ಕಿಯೋಸ್ಕ್ ಸ್ಥಾಪಿಸಿದ್ದವರ ವಿರುದ್ಧ ಸೈಬರ್ ಪೊಲೀಸರು ದಾಖಲಿಸಿದ್ದ ಎಫ್‍ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಬಿ.ವಿ.ಹರೀಶ್ ಹಾಗೂ ಸಾತ್ವಿಕ್ ವಿಶ್ವನಾಥ್ ಎಂಬವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿತು.

ಕೆಲವೆ ದಿನಗಳ ಹಿಂದೆ ಬಿಟ್ ಕಾಯಿನ್ ವ್ಯವಹಾರವನ್ನು ಆರ್‍ಬಿಐ ನಿರ್ಬಂಧಿಸಿತ್ತು. ಹೀಗಾಗಿ, ಬಿಟ್ ಕಾಯಿನ್ ಕಿಯೋಸ್ಕ್ ಸ್ಥಾಪಿಸಿದ್ದವರ ಮೇಲೆ ಸೈಬರ್ ಪೊಲೀಸರು ಮೊಕದ್ದಮೆ ದಾಖಲಿಸಿದ್ದರು. ಈ ನಡುವೆ, ಸುಪ್ರೀಂಕೋರ್ಟ್ ಬಿಟ್ ಕಾಯಿನ್ ಮೇಲಿನ ನಿರ್ಬಂಧ ರದ್ದುಪಡಿಸಿತ್ತು. ಹೀಗಾಗಿ, ತಮ್ಮ ವಿರುದ್ಧ ದಾಖಲಿಸಲಾಗಿದ್ದ ಎಫ್‍ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News