ಫಳ್ನೀರ್ ನಲ್ಲಿ ಶೂಟೌಟ್ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
Update: 2021-02-19 13:50 IST
ಮಂಗಳೂರು: ನಗರದ ಫಳ್ನೀರ್‌ನಲ್ಲಿ ರಿವಾಲ್ವಾರ್‌ನಿಂದ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ನಿವಾಸಿಗಳಾದ ಮುಹಮ್ಮದ್ ಸಮೀರ್ (29), ಮುಹಮ್ಮದ್ ಅರ್ಫಾನ್ (23) ಬಂಧಿತ ಆರೋಪಿಗಳು.
2020ರ ಅಕ್ಟೋಬರ್ 30ರಂದು ಸಂಜೆ 5 ಗಂಟೆಯ ಸುಮಾರಿಗೆ ಫಳ್ನೀರ್‌ನ ಹೊಟೇಲ್‌ನ ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆದಿತ್ತು. ಆರೋಪಿಗಳು ರಿವಾಲ್ವಾರ್‌ನಿಂದ ಗುಂಡು ಹಾರಿಸಿದ ಪರಿಣಾಮ ಸಿಬ್ಬಂದಿ ಗಾಯಗೊಂಡಿದ್ದರು. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊನೆಗೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಇಬ್ಬರು ಆರೋಪಿಗಳಿಗೂ ಅಪರಾಧದ ಹಿನ್ನೆಲೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.