​ಫೆ.20ರಂದು ವಗ್ಗದಲ್ಲಿ ಸೈಬರ್ ಕ್ರೈಮ್ ಕಾರ್ಯಾಗಾರ

Update: 2021-02-19 09:52 GMT

ಬಂಟ್ವಾಳ: ಕರ್ನಾಟಕ ಪತ್ರಕರ್ತರ ಸಂಘ ಬಂಟ್ವಾಳ ತಾಲೂಕು ಘಟಕ, ಕಾವಳಪಡೂರು, ವಗ್ಗ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗ ಇವುಗಳ ಜಂಟಿ ಆಶ್ರಯದಲ್ಲಿ ವಗ್ಗ ಪ್ರೌಢ ಶಾಲಾ ಸಭಾಂಗಣದಲ್ಲಿ ಸೈಬರ್ ಕ್ರೈಮ್ ಮಾಹಿತಿ ಕಾರ್ಯಾಗಾರ ಫೆ.20ರಂದು ಪೂರ್ವಾಹ್ನ 11.15ಕ್ಕೆ ನಡೆಯಲಿದೆ.

ಕರ್ನಾಟಕ ಪತ್ರಕರ್ತರ ಸಂಘದ ದ.ಕ.ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಕಾರ್ಯಾಗಾರ ಉದ್ಘಾಟಿಸಲಿದ್ದು, ಪ್ರೌಢ ಶಾಲಾ ವಿಭಾಗದ ಕಾರ್ಯಾಧ್ಯಕ್ಷ ಪಿ.‌ಜಿನರಾಜ ಆರಿಗ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಶೇಖ್ ಆದಂ ಸಾಹೇಬ್ ನೆಲ್ಯಾಡಿ, ಪತ್ರಕರ್ತರ ಸಂಘದ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ಈ ಸಂದರ್ಭ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಸಂಘದ ಅಧ್ಯಕ್ಷ ಫಾರೂಕ್ ಗೂಡಿನಬಳಿ ಸಭಾಧ್ಯಕ್ಷತೆ ವಹಿಸುವರು.

ಸೈಬರ್ ಕ್ರೈಮ್ ಕುರಿತ ಗ್ರಾಮಾಂತರ ಠಾಣಾಧಿಕಾರಿ ಪ್ರಸನ್ನ ಕುಮಾರ್ ಅವರು ಮಾಹಿತಿ ನೀಡಲಿದ್ದು, ಬಳಿಕ ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News