ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಸೌದಿ ಅರೇಬಿಯಾ ಘಟಕದ ಕಾರ್ಯಕರ್ತರ ಸಭೆ
ಮಂಗಳೂರು, ಫೆ.19: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಸೌದಿ ಅರೆಬಿಯಾ ಘಟಕದ ಕಾರ್ಯಕರ್ತರ ಸಭೆ ಹಾಗೂ ಯುವ ಕಾಂಗ್ರೆಸ್ ಆಂತರಿಕ ಚುನಾವಣೆಯಲ್ಲಿ ಆಯ್ಕೆಯಾದ ಜಿಲ್ಲಾ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಉಪಾಧ್ಯಕ್ಷ ಗಿರೀಶ್ ಆಳ್ವ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೆರಿಲ್ ರೆಗೋ ಅವರಿಗೆ ಅಭಿನಂದನಾ ಕಾರ್ಯಕ್ರಮವು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸಂಜೆ ನಡೆಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಎಲ್ಲರ ಸಹಕಾರ ಪಡೆದುಕೊಂಡು ಯುವ ಕಾಂಗ್ರೆಸ್‌ನ್ನು ಜಿಲ್ಲೆಯಲ್ಲಿ ಬಲಿಷ್ಠ ಸಂಘಟನೆಯಾಗಿ ಕಟ್ಟುವ ಕಾರ್ಯ ಮಾಡುವುದಾಗಿ ತಿಳಿಸಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಕಾಂಗ್ರೆಸ್ ದೇಶದಲ್ಲಿ ಸಾಮಾಜಿಕ ನ್ಯಾಯ, ವಂಚಿತರ, ಹಿಂದುಳಿದವರ, ದಲಿತರ, ಅಲ್ಪಸಂಖ್ಯಾತರ ಪರವಾಗಿರುವ ಪಕ್ಷ. ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸುವ ಮೂಲಕ ಸುಂದರ ಭಾರತ ನಿರ್ಮಾಣ ಸಾಧ್ಯ ಎಂದರು.
ರಾಜ್ಯಸಭಾ ಮಾಜಿ ಸದಸ್ಯ ಬಿ.ಇಬ್ರಾಹಿಂ ಮಾತನಾಡಿ, ಇಂಡಿಯನ್ ಓವರ್ಸೀಸ್ ಕಾಂಗ್ರೆಸ್ ಸೌದಿ ಆರೇಬಿಯಾ ಘಟಕ ನಮ್ಮ ರಾಜ್ಯ, ಜಿಲ್ಲೆಯ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಕಾಂಗ್ರೆಸ್‌ನ ಹಿರಿಯ ಮುಖಂಡ ಕೋಡಿಜಾಲ್ ಇಬ್ರಾಹಿಂ ಮಾತನಾಡಿ, ಸರ್ವರ ಹಿತ ಕಾಂಗ್ರೆಸ್ ಪಕ್ಷದ ಗುರಿಯಾಗಿದೆ. ಪಕ್ಷವನ್ನು ಬಲಿಷ್ಠ ಗೊಳಿಸುವ ಕಾರ್ಯದಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಮೊಯ್ದೀನ್ ಬಾವ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್, ದ.ಕ. ಜಿಲ್ಲಾ ಅಲ್ಪಸಂಖ್ಯಾತ ಅಧ್ಯಕ್ಷ ಶಾಹುಲ್ ಹಮೀದ್, ಸದಾಶಿವ್ ಉಳ್ಳಾಲ್, ಸುರತ್ಕಲ್ ಬ್ಲಾಕ್ ಅಧ್ಯಕ್ಷ ಸದಾಶಿವ್ ಶೆಟ್ಟಿ, ಸೇವಾದಳ ಅಧ್ಯಕ್ಷ ಸುರೇಶ್ ಶೆಟ್ಟಿ, ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷ ಸವಾದ್ ಸುಳ್ಯ, ದ.ಕ. ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷ ವಿಶ್ವಾಸ್‌ಕುಮಾರ್ ದಾಸ್, ಅಪ್ಪಿ, ಅಶ್ರಫ್, ಝೀನತ್ ಸಂಶುದ್ದೀನ್ ಬಂದರ್, ಆರೀಸ್ ಬೈಕಂಪಾಡಿ, ನಝೀರ್ ಬಜಾಲ್, ಸಂಶುದ್ದೀನ್ ಕುದ್ರೋಳಿ, ಯು.ಬಿ. ಸಲೀಂ ಉಳ್ಳಾಲ, ಸದಕಾ ಅಡ್ಡೂರು, ಅಬೂಬಕರ್ ಅಬ್ಬೋನ್, ನಿಶಾದ್ ಕುಳಾಯಿ, ಆರಿಫ್ ಸೂರಿಂಜೆ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸೈಫುದ್ದೀನ್ ಕಾಟಿಪಳ್ಳ ನಿರೂಪಿಸಿದರು. ಸ್ಟಾರ್ ನವಾಝ್ ಸ್ವಾಗತಿಸಿ, ವಂದಿಸಿದರು.