ಬೆಳ್ತಂಗಡಿ : ಬಾಲಕಿಗೆ ಕಿರುಕುಳ ; ಆರೋಪಿ ಸೆರೆ

Update: 2021-02-19 17:25 GMT

ಬೆಳ್ತಂಗಡಿ : ಉರುವಾಲು ಗ್ರಾಮದ ಕುಪ್ಪೆಟ್ಟಿಯ ನೆಕ್ಕಿಲ್ ಎಂಬಲ್ಲಿಯ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಘಟನೆಯ ವಿವರ: ಉರುವಾಲು ಗ್ರಾಮದ ಕುಪ್ಪೆಟ್ಟಿಯ ನೆಕ್ಕಿಲ್ ಎಂಬಲ್ಲಿ ಬಾಡಿಗೆ ಮನೆಯಲ್ಲಿ ತಾಯಿ, ಅಜ್ಜಿ, ತಮ್ಮನ ಜೊತೆ ವಾಸ್ತವ್ಯವಿದ್ದ ಬಾಲಕಿಗೆ ಕಿರುಕುಳ ನೀಡಿದ ಆರೋಪದಲ್ಲಿ ನೆಕ್ಕಿಲ್ ನಿವಾಸಿ ಸಮದ್ ಎಂಬಾತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News