×
Ad

ಉಪ್ಪಿನಂಗಡಿ : ಕಳವು ಪ್ರಕರಣ; ಆರೋಪಿ ಸೆರೆ

Update: 2021-02-19 23:01 IST

ಉಪ್ಪಿನಂಗಡಿ: ಇಲ್ಲಿನ ದಿನಸಿ ಅಂಗಡಿ ಸೇರಿದಂತೆ ಹಲವು ಕಳ್ಳತನ ಪ್ರಕರಣಗಳ ಪ್ರಮುಖ ಆರೋಪಿ ಬಂಧಿಸಿರುವುದಾಗಿ ಉಪ್ಪಿನಂಗಡಿ ಪೊಲೀಸರು ತಿಳಿಸಿದ್ದಾರೆ. 

ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಅಜಿರ್ಮಾರು ನಿವಾಸಿ ಹಮೀದ್ ಯಾನೆ ಕುಂಞಿಮೋನು (46) ಬಂಧಿತ ಆರೋಪಿ.

ಉಪ್ಪಿನಂಗಡಿ ಪೇಟೆಯಲ್ಲಿರುವ ಲಕ್ಷ್ಮೀ ಎಂಟರ್ ಪ್ರೈಸಸ್ ದಿನಸಿ ಅಂಗಡಿ ಹಾಗೂ ಅದರ ಪಕ್ಕದಲ್ಲಿದ್ದ ಉಲ್ಲಾಸ್ ಬಾರ್ ಆ್ಯಂಡ್ ರೆಸ್ಟೋರೆಂಟ್‍ ನಲ್ಲಿ ಕಳವು ನಡೆದಿರುವುದಾಗಿ ದೂರಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿ ಬಂಟ್ವಾಳದ ಸಜಿಪ ನಿವಾಸಿ ಫಾರೂಕ್ ಯಾನೆ ಉಮ್ಮರ್ ಫಾರೂಕ್ ಎಂಬಾತನನ್ನು ಈಗಾಗಲೇ ವಿಟ್ಲ ಪೊಲೀಸರು ಬಂಧಿಸಿದ್ದು, ಈತ ನ್ಯಾಯಾಂಗ ಬಂಧನಲ್ಲಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News