ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಬೆಂಗಳೂರು ಅಧ್ಯಕ್ಷರಾಗಿ ಬಿ.ಟಿ.ಶೆಟ್ಟಿ ಅಧಿಕಾರ ಸ್ವೀಕಾರ
ಬೆಂಗಳೂರು, ಫೆ.19: ದೇಶದಲ್ಲೇ ಅತಿ ದೊಡ್ಡ ಹಾಗೂ ಪ್ರತಿಷ್ಠಿತ ಇನ್‍ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಬೆಂಗಳೂರು ಬ್ರಾಂಚಿನ 52ನೇ ಅಧ್ಯಕ್ಷರಾಗಿ ಸಿಎ ಬಿ.ಟಿ.ಶೆಟ್ಟಿ ಅಧಿಕಾರ ಸ್ವೀಕರಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಕೊರೋನ ಸಂಕಷ್ಟ ಕಾಲದಲ್ಲಿ ಬೆಂಗಳೂರು ಬ್ರಾಂಚ್ ದೇಶದಲ್ಲಿಯೇ ಅತಿ ಹೆಚ್ಚು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉತ್ತಮ ಬ್ರಾಂಚ್ ಎನ್ನುವ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಇಂತಹ ಪ್ರತಿಷ್ಠಿತ ಸಂಸ್ಥೆಯ ಅಧ್ಯಕ್ಷನಾಗಿ ಆಯ್ಕೆ ಆಗಿರುವುದು ಬಹಳ ಹೆಮ್ಮೆ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮುಂಬರುವ ದಿನಗಳಲ್ಲಿ ವರ್ಚುಯಲ್ ಜೊತೆಗೆ ಫಿಸಿಕಲ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಹಾಗೂ ಚಾರ್ಟೆಡ್ ಅಕೌಂಟೆಂಟ್‍ಗಳ ಜ್ಞಾನವನ್ನು ಹೆಚ್ಚಿಸುವ ಉದ್ದೇಶ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ. ಇದೇ ವೇಳೆ ಉಪಾಧ್ಯಕ್ಷರಾಗಿ ಸಿಎ ಶ್ರೀನಿವಾಸ ಟಿ, ಕಾರ್ಯದರ್ಶಿ ಸಿಎ ದಿವ್ಯಾ, ಖಜಾಂಚಿಯಾಗಿ ಸಿಎ ಫಣೀಂದ್ರ ಗುಪ್ತಾ ಆಯ್ಕೆಯಾಗಿದ್ದಾರೆ.