ಕಡಬ: ಅಣ್ಣ, ದೊಡ್ಡಪ್ಪನಿಂದ ಅಪ್ರಾಪ್ತೆಯ ಅತ್ಯಾಚಾರ; ಆರೋಪಿಗಳ ಬಂಧನ

Update: 2021-02-20 12:11 GMT

ಕಡಬ, ಫೆ.20. ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಣ್ಣ ಹಾಗೂ ದೊಡ್ಡಪ್ಪ ಅತ್ಯಾಚಾರ ಎಸಗಿದ್ದಾರೆನ್ನಲಾದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಿವಾಸಿ ಹದಿನೈದರ ಹರೆಯದ ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಣ್ಣನೇ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಲಾಗಿದೆ, ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ವಿಚಾರಣೆ ನಡೆಸಿದಾಗ ದೊಡ್ಡಪ್ಪ ಕೂಡಾ ಅತ್ಯಾಚಾರಗೈದಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಲಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಕಡಬ ಪೊಲೀಸರು ಆರೋಪಿಗಳಾದ ಅಪ್ರಾಪ್ತೆಯ ಅಣ್ಣ ಹಾಗೂ ದೊಡ್ಡಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News