×
Ad

ಮಂಗಳೂರು ಏರ್‌ಪೋರ್ಟ್‌ನಲ್ಲಿ 19 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆ

Update: 2021-02-20 21:03 IST

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ಆತನಿಂದ ರೂ. 19,01,460  ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಕಾಸರಗೋಡು ನಿವಾಸಿ ಶೇಕ್ ಹನೀಫಾ (26) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ.

ಈತ  ದುಬೈನಿಂದ ಏರ್ ಇಂಡಿಯಾ ವಿಮಾನ ಐಎಕ್ಸ್ 1814 ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಅಧಿಕಾರಿಗಳು ತಪಾಸಣೆಗೊಳಪಡಿಸಿದಾಗ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈತನಿಂದ ಪಾದರಸ ಲೇಪಿತ 'ಇ' ಆಕಾರದ ಫಲಕಗಳಲ್ಲಿನ ಚಿನ್ನ ಮತ್ತು ಪಾದರಸ ಲೇಪಿತ ಕಡ್ಡಿಗಳನ್ನು ವಶಪಡಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News