ಪಂಚಮಸಾಲಿ ಮೀಸಲಾತಿ ಹೋರಾಟದ ಬಗ್ಗೆ ಸ್ವಾಮಿಜಿಯೊಂದಿಗೆ ಸಮಾಲೋಚನೆ: ಗೃಹ ಸಚಿವ ಬೊಮ್ಮಾಯಿ

Update: 2021-02-21 12:14 GMT

ಬೆಂಗಳೂರು, ಫೆ. 21: ಪಂಚಮಸಾಲಿ ಸಮುದಾಯಕ್ಕೆ ‘2ಎ' ಮೀಸಲಾತಿಗೆ ಆಗ್ರಹಿಸಿ ಹೋರಾಟಕ್ಕೆ ಸಂಬಂಧಿಸಿದಂತೆ ಬಸವ ಜಯಮೃತ್ಯುಂಜಯ ಸ್ವಾಮಿ ಅವರೊಂದಿಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಭೆ ನಡೆಸಿ ಈ ಬಗ್ಗೆ ಚರ್ಚಿಸಲಿದ್ದು, ಸಂವಿಧಾನದನ್ವಯ ಆಯೋಗದ ಮೂಲಕವೇ ಸರಕಾರಕ್ಕೆ ಶಿಫಾರಸು ಬರಬೇಕು. ಈ ಮಧ್ಯೆ ಇಂದು ಪಂಚಮಸಾಲಿ ಸಮಾವೇಶ ನಡೆಯುತ್ತಿದೆ. ಸ್ವಾಮೀಜಿಗಳ ಜತೆ ಈಗಾಗಲೇ ಸಮಾಲೋಚನೆ ನಡೆಸಿದ್ದೇವೆ ಎಂದರು.

ರಾಜ್ಯ ಸರಕಾರ ಇದುವರೆಗೆ ಕೈಗೊಂಡ ಕ್ರಮಗಳ ಬಗ್ಗೆ ಮನವರಿಕೆ ಮಾಡುವ ಮೂಲಕ ಮಾತುಕತೆಗೆ ಬನ್ನಿ ಎಂದು ಪಂಚಮಸಾಲಿ ಸ್ವಾಮೀಜಿಯನ್ನು ಆಹ್ವಾನಿಸುತ್ತೇವೆ ಎಂದ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರು ಸ್ವಾಮೀಜಿಯೊಂದಿಗೆ ಚರ್ಚಿಸಲು ಸೂಚನೆ ನೀಡಿದ್ದಾರೆಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News