ಮೀಸಲಾತಿಗೆ ಒತ್ತಾಯಿಸಿ ಮಾ.4ರ ವರೆಗೆ ಧರಣಿ ಸತ್ಯಾಗ್ರಹ: ಜಯಮೃತ್ಯುಂಜಯ ಸ್ವಾಮೀಜಿ

Update: 2021-02-21 14:21 GMT

ಬೆಂಗಳೂರು, ಫೆ.21: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ಫೆ.22ರಿಂದ ಮಾ.4ರ ವರೆಗೆ ಮೌರ್ಯ ಸರ್ಕಲ್ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಬೆಳಗ್ಗೆ 9ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.              

ರವಿವಾರ ಅರಮನೆ ಮೈದಾನದಲ್ಲಿ ನಡೆದ ಪಂಚಮಸಾಲಿ ಸಮುದಾಯದ ಸಮಾವೇಶದ ಬಳಿಕ ಮಾತನಾಡಿದ ಅವರು, 2ಎ ಮೀಸಲಾತಿಗಾಗಿ ಪ್ರತಿದಿನ ಧರಣಿ ಸತ್ಯಾಗ್ರಹ ನಡೆಸುತ್ತೇವೆ. ಮಾ.4ರೊಳಗೆ ಸರಕಾರ ಸೂಕ್ತವಾಗಿ ಸ್ಪಂದಿಸದಿದ್ದರೆ, ಮಾ.5ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹವನ್ನು ನಡೆಸುವುದು ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದ್ದು, ಪೊಲೀಸರೂ ಮೌರ್ಯ ಸರ್ಕಲ್ ಬಳಿ ಧರಣಿ ನಡೆಸಲು ಅವಕಾಶ ನೀಡಿದ್ದಾರೆ. ಹೀಗಾಗಿ ಪಾದಯಾತ್ರೆಯನ್ನು ಮೌರ್ಯ ವೃತ್ತದಲ್ಲಿ ಅಂತ್ಯಗೊಳಿಸಿದ್ದು, ನಾಳೆಯಿಂದ ಮಾ.4ರ ವರೆಗೆ ಸತ್ಯಾಗ್ರಹ ನಡೆಯಲಿದೆ. ಮೀಸಲಾತಿ ಘೋಷಣೆ ಆಗುವವರೆಗು ನಮ್ಮ ಹೋರಾಟ ನಿಲ್ಲದು ಎಂದು ಶ್ರೀಗಳು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News