ರಾಜ್ಯದಲ್ಲಿಂದು 413 ಹೊಸ ಕೊರೋನ ಪ್ರಕರಣ ದೃಢ: ಇಬ್ಬರು ಸಾವು

Update: 2021-02-21 16:19 GMT

ಬೆಂಗಳೂರು, ಫೆ.21: ರಾಜ್ಯದಲ್ಲಿ ರವಿವಾರ 413 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಜನರು ಸೋಂಕಿಗೆ ಬಲಿಯಾಗಿದ್ದು, 353 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,48,149ಕ್ಕೆ ತಲುಪಿದ್ದು, 127 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,294ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 6,036ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಇಬ್ಬರು ಸೋಂಕಿತರು ಬಲಿ: ಬೆಂಗಳೂರು ನಗರ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 413 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 3, ಬಳ್ಳಾರಿ 5,  ಬೆಳಗಾವಿ 15,  ಬೆಂಗಳೂರು ಗ್ರಾಮಾಂತರ 4,  ಬೆಂಗಳೂರು ನಗರ 248, ಚಿಕ್ಕಬಳ್ಳಾಪುರ 4 ಪ್ರಕರಣ ಪತ್ತೆಯಾಗಿವೆ.

ರಾಜಧಾನಿಯಲ್ಲಿ 248 ಕೊರೋನ ಪ್ರಕರಣ ದೃಢ

ರಾಜಧಾನಿಯಲ್ಲಿ ರವಿವಾರದಂದು 248 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ. 206 ಸೋಂಕಿತರು ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 403762 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,451 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News