×
Ad

ಕ್ರೈಸ್ಟ್‌ಕಿಂಗ್: ಬ್ಯಾಡ್ಮಿಂಟನ್‌ನಲ್ಲಿ ಆರುಷ್ ಜೈನ್‌ಗೆ ಬಹುಮಾನ

Update: 2021-02-21 23:17 IST

ಕಾರ್ಕಳ: ಮಂಗಳೂರಿನಲ್ಲಿ ನಡೆದ ಕೋಸ್ಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಆರುಷ್ ಜೈನ್ ಸಿಂಗಲ್ಸ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ.

ವಿವಾ ವೆಂಚರ್ಸ್‌ ಆಶ್ರಯದಲ್ಲಿ ಮಂಗಳೂರಿನ ಫಳ್ನೀರ್‌ನಲ್ಲಿ ನಡೆದ ಈ ಪಂದ್ಯಾಟದಲ್ಲಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಆಟಗಾರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News