ಭೀಮಾ ಕೊರೆಗಾಂವ್‌ ಪ್ರಕರಣ: ವರವರ ರಾವ್‌ ಗೆ ಜಾಮೀನು ನೀಡಿದ ನ್ಯಾಯಾಲಯ

Update: 2021-02-22 06:25 GMT

ಮುಂಬೈ: ಭೀಮಾ ಕೊರೆಗಾಂವ್‌ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಖ್ಯಾತ ಕವಿ ಹಾಗೂ ಸಾಮಾಜಿಕ ಹೋರಾಟಗಾರ ವರವರರಾವ್‌ ರವರಿಗೆ ಬಾಂಬೆ ಹೈಕೋರ್ಟ್‌ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ.

ಅವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಮುಂಬೈನಲ್ಲೇ ಉಳಿಯುವಂತೆ ಹಾಗೂ ವಿಚಾರಣೆಗೆ ಲಭ್ಯವಿರುವಂತೆ ಅವರಿಗೆ ಸೂಚಿಸಲಾಗಿದೆ.

ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿದ್ದು, ಡಿಸೆಂಬರ್ 31, 2017 ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡದ ಕಾರಣ ಮರುದಿನ ಕೊರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ಹೇಳಿಕೆ ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 9 ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News