ಟೂಲ್‌ ಕಿಟ್‌ ಪ್ರಕರಣ: ದಿಶಾ ರವಿಯನ್ನು ಒಂದು ದಿನ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ

Update: 2021-02-22 13:06 GMT

ಹೊಸದಿಲ್ಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿ ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳಿಗೆ ಸಾಮಾಜಿಕ ತಾಣದಲ್ಲಿ "ಟೂಲ್ ಕಿಟ್" ಹಂಚಿಕೊಂಡಿದ್ದಾರೆ ಎಂಬ ಆರೋಪದಡಿ ಬಂಧಿಸಲ್ಪಟ್ಟ 21 ವರ್ಷದ ಹವಾಮಾನ ಕಾರ್ಯಕರ್ತ ದಿಶಾ ರವಿ ಅವರನ್ನು ದೆಹಲಿ ನ್ಯಾಯಾಲಯ ಸೋಮವಾರ ಒಂದು ದಿನದ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ‌ ಎಂದು ತಿಳಿದು ಬಂದಿದೆ.

ಸಹ-ಆರೋಪಿಗಳೊಂದಿಗೆ ಆಕೆಯನ್ನು ವಿಚಾರಣೆ ನಡೆಸಬೇಕಾಗಿದೆ ಎಂದು ಪೊಲೀಸರು ಹೇಳಿದ್ದರಿಂದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪಂಕಜ್ ಶರ್ಮಾ, ದಿಶಾ ರವಿಯನ್ನು ಕಸ್ಟಡಿ ವಿಚಾರಣೆಗೆ ಅನುಮತಿಸಿದರು.

ದಿಶಾ ರವಿಯ ಮೂರು ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಹ-ಆರೋಪಿಗಳಾದ ನಿಕಿತಾ ಜಾಕೋಬ್ ಮತ್ತು ಶಾಂತನು ಮುಲುಕ್ ಫೆಬ್ರವರಿ 22 ರಂದು ವಿಚಾರಣೆಗೆ ಹಾಜರಾದ ಬಳಿಕ ದಿಶಾ ರವಿಯನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸುವುದಾಗಿ ಸಂಸ್ಥೆ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News