ದ.ಕ. ಜಿಲ್ಲೆಯಲ್ಲಿ ಸೋಮವಾರ 10 ಮಂದಿಗೆ ಕೊರೋನ ಪಾಸಿಟಿವ್

Update: 2021-02-22 15:53 GMT

ಮಂಗಳೂರು, ಫೆ.22: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 10 ಕೊರೋನ ಪಾಟಿಸಿವ್ ಪ್ರಕರಣ ಪತ್ತೆಯಾಗಿದ್ದು, 20 ಮಂದಿ ಗುಣಮುಖರಾಗಿದ್ದಾರೆ. ಸೋಮವಾರ ಕೊರೋನದಿಂದ ಯಾವುದೇ ಸಾವು ಸಂಭವಿಸಿಲ್ಲ.

ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 34,324ಕ್ಕೆ ಏರಿಕೆಯಾಗಿದೆ. ಈ ಪೈಕಿ 210 ಸಕ್ರಿಯ ಪ್ರಕರಣಗಳು. 33,374 ಮಂದಿ ಗುಣಮುಖರಾಗಿದ್ದಾರೆ. 740 ಮಂದಿ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 33,490 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 34,60,740 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News