ಪ್ರತಿ ಕ್ಷೇತ್ರದಲ್ಲೂ ಜಾತಿ, ಧರ್ಮ, ಹಣ ಕಾಲಿಟ್ಟಿದೆ: ಸತೀಶ್ ಜಾರಕಿಹೊಳಿ

Update: 2021-02-22 17:51 GMT

ಬೆಳಗಾವಿ, ಫೆ.22:  ದೇಶದ ಎಲ್ಲ ಕ್ಷೇತ್ರಗಳಲ್ಲೂ ಜಾತಿ, ಧರ್ಮ, ಹಣ ಕಾಲಿಟ್ಟಿದ್ದು, ಪ್ರಸ್ತುತ ದಿನದಲ್ಲಿ ಪ್ರಾಮಾಣಿಕರನ್ನು ಪತ್ತೆ ಹಚ್ಚುವುದು ಕಷ್ಟ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ನಗರದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಅಧಿಕಾರ ನಡೆಸುತ್ತಿರುವ ಆಡಳಿತ ಪಕ್ಷದ ವೈಫಲ್ಯ ಎತ್ತಿ ತೋರಿಸುವ ಬದಲು ಕಾಂಗ್ರೆಸ್ ಪಕ್ಷದ ತಪ್ಪನ್ನೇ ಹುಡುಕುತ್ತಾರೆ. ಹೀಗಾಗಿ, ಕಾಂಗ್ರೆಸ್ ಸಣ್ಣ ತಪ್ಪು ಮಾಡಿದರೂ ಅದನ್ನೇ ದೊಡ್ಡದು ಮಾಡಲಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲೂ ಜಾತಿ, ಧರ್ಮ, ಹಣ ಕಾಲಿಟ್ಟಿದೆ ಎಂದು ಹೇಳಿದರು. 

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮಮಂದಿರಕ್ಕೆ ಕಾಂಗ್ರೆಸ್ ಪಕ್ಷ ದೇಣಿಗೆ ನೀಡದಿದ್ದರೆ ಮುಸ್ಲಿಮರ ಓಲೈಕೆ ಮಾಡಲಾಗುತ್ತಿದೆ ಎಂದು ಹೇಳುತ್ತಾರೆ. ಈಗಾಗಲೇ ಕಾಂಗ್ರೆಸ್ ಪಕ್ಷದವರು ಸೇರಿದಂತೆ ಇತರೆ ಪಕ್ಷದ ಸಾಕಷ್ಟು ಜನರು ದೇಣಿಗೆ ನೀಡಿದ್ದಾರೆ. ದೇಣಿಗೆ ನೀಡುವವರು ನೀಡೆ ನೀಡುತ್ತಾರೆ ಎಂದು ಹೇಳಿದರು.

ರಾಮಮಂದಿರ ಬಿಜೆಪಿ ಪಕ್ಷದ ಆಸ್ತಿಯಲ್ಲ. ಅದೊಂದು ಭಾವನೆ ಆಗಿದ್ದು, ರಾಮಮಂದಿರ ದೇಣಿಗೆ ಹಣಕ್ಕೆ ದುರುಪಯೋಗ ಆರೋಪದ ಬಗ್ಗೆ ಮಾಧ್ಯಮದವರು ಬೆಳಕು ಚೆಲ್ಲುವ ಕಾರ್ಯ ಮಾಡಬೇಕು. ಕಾಂಗ್ರೆಸ್‍ನವರು ಏನಾದರೂ ಮಾಡಲು ಹೋದರೆ ನಮ್ಮನ್ನೇ ಸಿಕ್ಕಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಅಧಿಕಾರ ನಡೆಸುತ್ತಿರುವ ಆಡಳಿತ ಪಕ್ಷದ ವೈಫಲ್ಯ ಎತ್ತಿ ತೋರಿಸುವ ಬದಲು ಕಾಂಗ್ರೆಸ್ ಪಕ್ಷದ ತಪ್ಪನ್ನೇ ಹುಡುಕುತ್ತಾರೆ. ಹೀಗಾಗಿ ಕಾಂಗ್ರೆಸ್ ಸಣ್ಣ ತಪ್ಪು ಮಾಡಿದರೂ ಅದನ್ನೇ ದೊಡ್ಡದು ಮಾಡಲಾಗುತ್ತಿದೆ. ಇದಲ್ಲದೇ ವಿವಿಧ ಸಮುದಾಯಗಳು ನಡೆಸುತ್ತಿರುವ ಮೀಸಲಾತಿ ಹೋರಾಟಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೋರಾಟದ ಮೂಲಕ ಬಿಜೆಪಿ ಪಕ್ಷವನ್ನು ಇಕ್ಕಟ್ಟಿಗೆ ಸಿಕ್ಕಿಸುವ ಪ್ರಶ್ನೇ ಉದ್ಭವ ಆಗುವುದಿಲ್ಲ. ಕಾನೂನಿನಲ್ಲೇನಿದೆ ಅದನ್ನು ಅಷ್ಟೇ ಮಾಡಬೇಕಾಗುತ್ತೆ. ಮೀಸಲಾತಿ ಕೇಳಲು ಹಕ್ಕಿದೆ. ಆದರೆ, ಸರಕಾರದಿಂದ ಎಲ್ಲರಿಗೂ ಮೀಸಲಾತಿ ಕೊಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮೀಸಲಾತಿಗೆ ಅದರದ್ದೇ ಆದ ಕಾನೂನಿನ ಮಾನದಂಡಗಳಿದ್ದು, ಯಾವ ಸಮುದಾಯಕ್ಕೆ ಅವಶ್ಯಕತೆ ಇದೆ. ಅವರಿಗೆ ಮೀಸಲಾತಿ ಸಿಗುತ್ತದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News