ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ: ಇಬ್ಬರ ಬಂಧನ

Update: 2021-02-23 04:49 GMT
ಫೋಟೊ ಕೃಪೆ: twitter

ಚಿಕ್ಕಬಳ್ಳಾಪುರ, ಫೆ.23 ಜಿಲ್ಲೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ಈಗಾಗಳೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಚಿವರು, ತನಿಖೆ ವಿಚಾರವಾಗಿ ಘಟನಾ ಸ್ಥಳದಿಂದಲೇ ಮುಖ್ಯಮಂತ್ರಿ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾನೆ. ಕಾನೂನು ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳು ಈಗಾಗಲೇ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News