ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣದ ಬಗ್ಗೆ ಸಿಐಡಿ ತನಿಖೆ: ಗೃಹ ಸಚಿವ ಬೊಮ್ಮಾಯಿ

Update: 2021-02-23 12:26 GMT

ಬೆಂಗಳೂರು, ಫೆ.23: ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ವರದಿ ಬಂದ 24 ಗಂಟೆಯಲ್ಲಿ ತಪಿತಸ್ಥರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ವಹಿಲಾಗುವುದೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿಸಿದ್ದಾರೆ.

ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆಯ ಹಿರೇನಾಗವೇಲಿಯಲ್ಲಿ ಸ್ಫೋಟ ಸಂಭವಿಸಿದ ಕ್ವಾರಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸಿ ತಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಇಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲವೆಂದು ಅವರು ತಿಳಿಸಿದ್ದಾರೆ.

5 ಲಕ್ಷ ರೂ. ಪರಿಹಾರ

ಚಿಕ್ಕಬಳ್ಳಾಪುರ ಕ್ವಾರಿಯಲ್ಲಿ ನಡೆದಿರುವ ಸ್ಪೋಟ ಪ್ರಕರಣದಲ್ಲಿ ಸಾವನ್ನಪ್ಪಿರುವ ಆರು ಮಂದಿಯ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು. ಪ್ರಕರಣದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯನ್ನು ಕಲ್ಪಿಸಲಾಗುವುದು.

-ಬಸವರಾಜ ಬೊಮ್ಮಾಯಿ, ಗೃಹ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News