ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ: ಡಾ.ಕೆ.ಸುಧಾಕರ್

Update: 2021-02-23 12:41 GMT

ಬೆಂಗಳೂರು, ಫೆ.23: ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕರು ವಾಸ್ತವಾಂಶ ಅರಿಯದೆ ಈ ರೀತಿ ಸಾವಿನಲ್ಲೂ ರಾಜಕೀಯ ಮಾಡುವುದು ಶೋಭೆ ತರುವುದಿಲ್ಲ. ನಿಯಮ ಬಾಹಿರವಾಗಿ ಜಿಲೆಟಿನ್ ಸಂಗ್ರಹಣೆ ಮಾಡುತ್ತಿದ್ದವರ ವಿರುದ್ಧ ಅಧಿಕಾರಿಗಳು ರೈಡ್ ಮಾಡಿದ್ದ ಸಂದರ್ಭದಲ್ಲಿ ಅದನ್ನು ಬೇರೆಡೆ ಸಾಗಿಸುವಾಗ ಈ ದುರಂತ ಸಂಭವಿಸಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಜೊತೆ ಘಟನಾ ಸ್ಥಳದಿಂದಲೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಪೊಲೀಸ್ ಅಧಿಕಾರಿಗಳು ಈಗಾಗಲೇ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಅಕ್ರಮ ಗಣಿಗಾರಿಕೆ ಅಥವಾ ಇನ್ಯಾವುದೇ ರೀತಿಯ ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳಿಗೆ ನಾನು ಎಂದಿಗೂ ಬೆಂಬಲ ನೀಡಿಲ್ಲ ಮತ್ತು ಮುಂದೆಯೂ ನೀಡುವುದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವನಾಗಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ದೊರಕಿಸುವುದು ನನ್ನ ಕರ್ತವ್ಯವಾಗಿದ್ದು ಆದಷ್ಟು ಬೇಗ ಈ ಕೆಲಸ ಮಾಡಲಿದ್ದೇನೆ ಎಂದು ಸುಧಾಕರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News