ಆಸ್ಪತ್ರೆಯಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಚಿತ್ರೀಕರಣ ಆರೋಪ: ಲ್ಯಾಬ್ ಟೆಕ್ನಿಷಿಯನ್‍ ಬಂಧನ

Update: 2021-02-23 12:46 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.23: ಆಸ್ಪತ್ರೆಯಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವುದನ್ನು ಮೊಬೈಲ್‍ನಲ್ಲಿ ಚಿತ್ರೀಕರಣ ಮಾಡುತ್ತಿದ್ದ ಆರೋಪದಡಿ ಓರ್ವ ಲ್ಯಾಬ್ ಟೆಕ್ನಿಷಿಯನ್‍ನನ್ನು ತಿಲಕ್‍ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಸರಕಾರಿ ಅಸ್ಪತ್ರೆಯೊಂದರ ವೈದ್ಯೆ ನೀಡಿದ ದೂರಿನ ಮೇರೆಗೆ ಆರೋಪಿ ಲ್ಯಾಬ್ ಟೆಕ್ನಿಷಿಯನ್ ಮಾಲತೇಶ್‍ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ಪತ್ರೆಯೊಂದರಲ್ಲಿ ಲ್ಯಾಬ್ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದ ಮಾಲತೇಶ್ ಹೆಚ್ಚಾಗಿ ಶಸ್ತ್ರಾಚಿಕಿತ್ಸಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಈ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸಲು ಮುಂದಾಗುತ್ತಿದ್ದ ವೇಳೆ ಚಿತ್ರೀಕರಣ ಮಾಡುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ವೈದ್ಯೆಯೊಬ್ಬರು ಅನುಮಾನಗೊಂಡು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ತಿಲಕ್‍ನಗರ ಪೊಲೀಸರಿಗೆ ದೂರು ನೀಡಿದ್ದು, ಇದರ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News