2ನೇ ದಿನವೂ ಮುಂದುವರಿದ ಪಂಚಮಸಾಲಿ ಸಮುದಾಯದ ಧರಣಿ

Update: 2021-02-23 12:46 GMT

ಬೆಂಗಳೂರು, ಫೆ.23: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ `2ಎ' ಅಡಿಯಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಧರಣಿ 2ನೆ ದಿನವಾದ ಮಂಗಳವಾರ ಕೂಡ ಮುಂದುವರಿದಿದೆ.

2ಎ ಮೀಸಲಾತಿಗೆ ಆಗ್ರಹಿಸಿ ಕೂಡಲ ಸಂಗಮದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಸಿ ಫೆ.21ರಂದು ನಗರದ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಿದ್ದ ಪಂಚಮಸಾಲಿ ಸಮುದಾಯದವರು ಮಾ.4ರವರೆಗೂ ಫ್ರೀಡಂ ಪಾರ್ಕ್‍ನಲ್ಲಿ ಬೆಳಗ್ಗೆ 9ರಿಂದ ಸಂಜೆ 6ರ ವರೆಗೂ ಧರಣಿ ನಡೆಸಲು ಮುಂದಾಗಿದ್ದಾರೆ.

ಪಂಚಮಸಾಲಿಗಳ 2ಎ ಮೀಸಲಾತಿ ಬೇಡಿಕೆ ಈಡೇರಿಕೆವರೆಗೂ ಹೋರಾಟ ನಿಲ್ಲದು. ಮಾ.4ರ ನಂತರ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸ್ವಾಮೀಜಿ ಹೇಳಿದ್ದಾರೆ.

ಸರಕಾರ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಲಿದೆ ಸ್ವಲ್ಪ ಕಾಲಾವಕಾಶ ಕೊಡಿ, ಧರಣಿ ಕೈಬಿಡಿ ಎಂಬ ಸರಕಾರದ ಮನವಿಗೆ ಒಪ್ಪದ ಸ್ವಾಮೀಜಿಗಳು, ಆದೇಶ ಹೊರಬೀಳುವವರೆಗೂ ಹೋರಾಟ ನಿಲ್ಲದು ಎಂದು ಹೇಳಿದ್ದಾರೆ.

ಧರಣಿ ಸಂದರ್ಭದಲ್ಲಿ ಮಾಜಿ ಶಾಸಕ ವಿಜಯಾನಂದ ಕಾಸಪ್ಪನವರ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News