×
Ad

ಪ್ರಥಮ ಹಂತದ ಕೋವಿಡ್ ಲಸಿಕೆ: ಫೆ.24ರಂದು ಕೊನೆಯ ಅವಕಾಶ

Update: 2021-02-23 19:02 IST

ಉಡುಪಿ, ಫೆ.23: ಪ್ರಥಮ ಹಂತದ ಕೋವಿಡ್ ಲಸಿಕೆ ಪಡೆಯಲು ಈಗಾಗಲೇ ಹೆಸರು ನೊಂದಾಯಿಸಿಕೊಂಡು, ಇದುವರೆಗೂ ಲಸಿಕೆ ಪಡೆಯದ ಸರಕಾರಿ ಮತ್ತು ಖಾಸಗಿ ವಲಯದ ಆರೋಗ್ಯ ಕ್ಷೇತ್ರದ ಕಾರ್ಯಕರ್ತರು ಲಸಿಕೆ ಪಡೆಯಲು ನಾಳೆ (ಬುಧವಾರ) ಕೊನೆಯ ಅವಕಾಶ ನೀಡಲಾಗಿದೆ.

ಆದ್ದರಿಂದ ಪ್ರಥಮ ಹಂತದ ಲಸಿಕೆ ಪಡೆಯಲು ಹೆಸರು ನೊಂದಾಯಿಸಿಕೊಂಡು, ಇದುವರೆಗೂ ಲಸಿಕೆ ಪಡೆಯದ ಸರಕಾರಿ ಮತ್ತು ಖಾಸಗಿ ವಲಯದ ಆರೋಗ್ಯ ಕ್ಷೇತ್ರದ ಕಾರ್ಯಕರ್ತರು, ಜಿಲ್ಲೆಯ ತಮ್ಮ ಸಮೀಪದ ಸರಕಾರಿ ಆಸ್ಪತ್ರೆಗಳಲ್ಲಿ ಮತ್ತು ಖಾಸಗಿ ಆಸ್ಪತ್ರೆಗಳಾದ ಕೆಎಂಸಿ ಮಣಿಪಾಲ, ಸಿಎಸ್‌ಐ ಲೊಂಬಾರ್ಡ್ ಆಸ್ಪತ್ರೆ ಉಡುಪಿ, ಆದರ್ಶ ಆಸ್ಪತ್ರೆ ಉಡುಪಿ, ಎಸ್‌ಡಿಎಂ ಉದ್ಯಾವರ, ಕುಂದಾಪುರದ ಆದರ್ಶ ಆಸ್ಪತ್ರೆ, ಎನ್.ಆರ್. ಆಚಾರ್ಯ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ‌ಚಂದ್ರ ಸೂಡಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News