ವಯೋಶ್ರೇಷ್ಠ ಸಮ್ಮಾನ್ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2021-02-23 13:58 GMT

ಉಡುಪಿ, ಫೆ.23: ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ 2021-22ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ /ಸಂಸ್ಥೆಗಳಿಂದ ವಯೋಶ್ರೇಷ್ಠ ಸಮ್ಮಾನ್-2021 ರಾಷ್ಟ್ರ ಪ್ರಶಸ್ತಿಗಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರಶಸ್ತಿಗೆ ಪ್ರಸ್ತಾವನೆ ಸಲ್ಲಿಸಲು ಮಾರ್ಚ್ 3 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್-  socialjustice.nic.in -ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574810/811 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News