ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ

Update: 2021-02-23 14:00 GMT

ಉಡುಪಿ, ಫೆ.23: ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಸಕ್ತ ಸಾಲಿನ ವಿಶ್ವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಉಡುಪಿಯ ರಾಘವೇಂದ್ರ ಉಡುಪ ಇವರು ಕಲಾಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಹಿರಿಯ ನಾಗರಿಕರ ಪ್ರಶಸ್ತಿ, ವಿಕಲಚೇತನರ ಪುನರ್ವಸತಿ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗಾಗಿ ಕುಂದಾಪುರದ ಮಂಜುನಾಥ್ ಹೆಬ್ಬಾರ್ ಇವರಿಗೆ ವೈಯಕ್ತಿಕ ಪ್ರಶಸ್ತಿ ಹಾಗೂ ಮಣಿಪಾಲದ ಅರ್ಚನಾ ಟ್ರಸ್ಟ್‌ನ ಆಸರೆ ಬುದ್ಧಿಮಾಂದ್ಯ ಮಕ್ಕಳ ವಸತಿಯುತ ವಿಶೇಷ ಶಾಲೆಗೆ ಅತ್ಯುತ್ತಮ ಸೇವೆ ಸಲ್ಲಿಸಿದ ಸಂಸ್ಥೆ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿ ಪುರಸ್ಕೃತರಿಗೆ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News