'ಯತ್ನಾಳ್ ಕಾಂಗ್ರೆಸ್ಸಿನ ಬಿ ಟೀಮ್' ಎಂಬ ನಿರಾಣಿ ಹೇಳಿಕೆ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ

Update: 2021-02-23 14:42 GMT

ಬೆಳಗಾವಿ, ಫೆ.23: ವಿಜಯಪುರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್ಸಿನ ಬಿ ಟೀಮ್ ಎಂಬ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಒತ್ತಡಕ್ಕೆ ಮಣಿದು ಮುರುಗೇಶ್ ನಿರಾಣಿ ಅವರು ಈ ರೀತಿ ಆರೋಪ ಮಾಡಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ ಎಂದರು.

ಬೆಂಗಳೂರಿನಲ್ಲಿ ನಡೆದ ಸಮಾವೇಶ ಕಾಂಗ್ರೆಸ್ ಪ್ರಾಯೋಜಿತ ಎಂಬ ಮುರುಗೇಶ್ ನಿರಾಣಿ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ಇದು ಸಮಾಜದ ಸಮಾವೇಶ, ಸಮಾಜದ ಕೆಲಸವಾಗಿದೆ. ಯಾವುದೇ ಪಕ್ಷಕ್ಕೆ ಅನುಕೂಲವಾಗಲಿ ಎಂದು ನಾವು ಹೋರಾಟ, ಸಮಾವೇಶ ಮಾಡುತ್ತಿಲ್ಲ ಎಂದು ತಿಳಿಸಿದರು.

ಮಾರ್ಚ್ 4ರ ನಂತರ ಸಮುದಾಯದ ಸ್ವಾಮೀಜಿಗಳು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಹೇಳಿದ್ದಾರೆ. ಇದಕ್ಕೂ ಮುನ್ನವೇ 2ಎ ಮೀಸಲಾತಿ ಸಿಗುವ ರೀತಿ ಕೆಲಸ ಮಾಡಬೇಕು. ಇದಾದ ಬಳಿಕ ಓಬಿಸಿ ಮೀಸಲಾತಿಗೆ ಕೇಂದ್ರ ಸರಕಾರಕ್ಕೆ ಶಿಫಾರಸು ಕೂಡ ಮಾಡಬೇಕು ಎಂದು ಅವರು ಒತ್ತಾಯ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News