ಡಿಜೆ-ಕೆಜಿ ಹಳ್ಳಿ ಗಲಭೆ ಪ್ರಕರಣ: ಇದುವರೆಗೆ 247 ಜನರ ಬಂಧನ- ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖ

Update: 2021-02-23 15:20 GMT

ಬೆಂಗಳೂರು, ಫೆ.23: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಎನ್‍ಐಎ ಸಲ್ಲಿಸಿದ್ದ ಚಾರ್ಜ್‍ಶೀಟ್ ಪ್ರತಿ ಇದೀಗ ಲಭ್ಯವಾಗಿದೆ.

ಎನ್‍ಐಎ ಅವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್‍ಶೀಟ್‍ನಲ್ಲಿ ಗಲಭೆಯಲ್ಲಿ ಇದುವರೆಗೆ 247 ಮಂದಿ ಆರೋಪಿಗಳ ಬಂಧನವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮೊದಲೇ ಸಂಚು ರೂಪಿಸಿದ್ದ ಆರೋಪಿಗಳು, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಂಬಂಧಿ ನವೀನ್, ಫೇಸ್‍ಬುಕ್‍ನಲ್ಲಿ ಅವಹೇಳಕಾರಿಯಾಗಿ ಪೋಸ್ಟ್ ಹಾಕುತ್ತಿದ್ದಂತೆಯೇ ಪರಿಸ್ಥಿತಿಯನ್ನೇ ಸದುಪಯೋಗಪಡಿಸಿಕೊಂಡ ಆರೋಪಿಗಳು, ಗಲಭೆ ಎಬ್ಬಿಸಿದ್ದರು ಎಂದು ಉಲ್ಲೇಖಿಸಲಾಗಿದೆ.

ಅವಹೇಳನಕಾರಿ ಪೋಸ್ಟ್ ಬೆನ್ನಲ್ಲೇ ಹಲವರು ಶಾಸಕರ ಮನೆ ಹಾಗೂ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಠಾಣೆಗಳ ಮುಂದೆ ಜಮಾವಣೆಗೊಂಡಿದ್ದರು. ಪ್ರತಿಭಟನಾಕಾರರು ಫೇಸ್‍ಬುಕ್ ಹಾಗೂ ಇತರ ಸಾಮಾಜಿಕ ಮಾಧ್ಯಮಗಳ ಮೂಲಕ ಗಲಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಚೋದನೆ ಮಾಡಿದ್ದರಿಂದ ಹೊರಗಿನಿಂದ ಜನ ಸೇರಲು ಕಾರಣವಾಯಿತು. ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ಒಗ್ಗೂಡಿಸಿದ್ದ ಗಲಭೆಕೋರರು ಗಲಭೆ ಎಬ್ಬಿಸಿದ್ದಾರೆ. ಪೊಲೀಸ್ ಠಾಣೆಗಳ ಮೇಲಿನ ದಾಳಿಗೆ ಪ್ರೇರಣೆಯಾಗಿದ್ದೂ ಸಹ ಸಾಮಾಜಿಕ ಜಾಲತಾಣವಾಗಿದೆ ಎಂದು ಎನ್‍ಐಎ ಸಲ್ಲಿಸಿದ ಚಾರ್ಜ್‍ಶೀಟ್‍ನಲ್ಲಿ ಪ್ರಮುಖ ಅಂಶಗಳಾಗಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News