ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಿದ್ದೇನೆ: ಯು.ಟಿ. ಇಫ್ತಿಕಾರ್

Update: 2021-02-23 16:14 GMT

ಮಂಗಳೂರು, ಫೆ.23: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಳೆದ ವಾರ ತನ್ನ ಫ್ಲಾಟ್ ಗೆ ಪರಿಶೀಲನೆಗೆ ಬಂದಿದ್ದ ಸಂದರ್ಭದಲ್ಲಿ ಅವರಿಗೆ ಸಂಪೂರ್ಣ ಸಹಕಾರ ನೀಡಿದ್ದೇನೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿವಿಯ ಸಿಂಡಿಕೇಟ್ ಸದಸ್ಯ ಡಾ.ಯು.ಟಿ. ಇಫ್ತೀಕಾರ್ ಅಲಿ ಸ್ಪಷ್ಟಪಡಿಸಿದ್ದಾರೆ.

ಐಟಿ ಅಧಿಕಾರಿಗಳು ನಮ್ಮ ಮನೆಗೆ ಆಗಮಿಸಿ, ಅವರ ಕರ್ತವ್ಯ ನಿರ್ವಹಿಸಿದ್ದಾರೆ. ಇದಕ್ಕೆ ಯಾವುದೇ ಅಡೆತಡೆಯೊಡ್ಡದೇ ಸಂಪೂರ್ಣ ಸಹಕಾರ ನೀಡಿದ್ದೇನೆ. ಐಟಿ ಅಧಿಕಾರಿಗಳು ಬರುವಾಗ ಮಾಹಿತಿ ನೀಡಿ ಬರುವುದಿಲ್ಲ. ಪೂರ್ವ ನಿಗದಿತ ಕಾರ್ಯಕ್ರಮಕ್ಕಾಗಿ ನಾನು ಬಹರೈನ್ ಗೆ ತೆರಳಿದ್ದೆ. ತನ್ನ ಫ್ಲಾಟ್ ಗೆ ಪರಿಶೀಲನೆಗೆ ಬಂದಿದ್ದ ಮಾಹಿತಿ ಸಿಕ್ಕ ಕೂಡಲೇ ಹಿಂದಿರುಗಿ ಬಂದು ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಿದ್ದೇನೆ ಎಂದು ಯು.ಟಿ. ಇಫ್ತೀಕಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News