ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮುಸ್ಲಿಂ ಲೀಗ್ ಮನವಿ

Update: 2021-02-23 16:23 GMT

ಮಂಗಳೂರು, ಫೆ.23: ಅಡುಗೆ ಅನಿಲ, ಡೀಸೆಲ್, ಪೆಟ್ರೋಲ್ ಸಹಿತ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ವಾರ್ಷಿಕ ಆದಾಯ 2 ಲಕ್ಷ ರೂ. ಇದ್ದವರಿಗೆ ಬಿಪಿಎಲ್ ಪಡಿತರ ಚೀಟಿ ನೀಡಬೇಕು, ಅರಿವು ಸಾಲವನ್ನು ತ್ವರಿತಗತಿಯಲ್ಲಿ ವಿತರಿಸಬೇಕು, ಸಕಾಲಕ್ಕೆ ವಿದ್ಯಾರ್ಥಿ ವೇತನ ಸಿಗುವಂತೆ ಮಾಡಬೇಕು, 10 ಮತ್ತು ಪಿಯುಸಿ ಪರೀಕ್ಷೆಯಲ್ಲಿ 500ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ನೀಡಲಾಗುವ ಗೌರವಧನ ಹೆಚ್ಚಿಸಬೇಕು ಇತ್ಯಾದಿ ಬೇಡಿಕೆಯನ್ನು ಈಡೇರಿಸಬೇಕು ಎಂದು ದ.ಕ.ಜಿಲ್ಲಾ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ನಿಯೋಗವು ದ.ಕ.ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಲೀಗ್ ಜಿಲ್ಲಾಧ್ಯಕ್ಷ ತಬೂಕ್ ಅಬ್ದುಲ್ ರಹ್ಮಾನ್ ದಾರಿಮಿ, ಬಶೀರ್, ಮುಹಮ್ಮದ್ ಇಸ್ಮಾಯೀಲ್, ಸತ್ತಾರ್ ನಿಯೋಗದಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News