×
Ad

ಫೆ. 27 : ಮಿಯ್ಯಾರು ಲವ– ಕುಶ ಜೋಡುಕರೆ ಕಂಬಳ

Update: 2021-02-23 22:44 IST

ಕಾರ್ಕಳ : ಕಾರ್ಕಳದ ಮಿಯ್ಯಾರು ಲವ-ಕುಶ 17ನೇ ವರ್ಷದ ಜೋಡುಕರೆ ಕಂಬಳ ಫೆ. 27ರಂದು ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರಾದ ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿರುತ್ತಾರೆ.

ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ನಡೆಯಬೇಕಾಗಿದ್ದ ಕಂಬಳಕೂಟ ಕೋವಿಡ್ ಕಾರಣದಿಂದ ಮುಂದೂಡಲ್ಪಟ್ಟು ಫೆಬ್ರವರಿಯಲ್ಲಿ ನಡೆಯು ತ್ತಿದೆ. ರೈತಾಪಿ ಜನರ ಮತ್ತು ಕಂಬಳಾಭಿಮಾನಿಗಳ ಅಭಿಪ್ರಾಯದಂತೆ ಸರಕಾರದ ನಿಯಮಾವಳಿಗಳನ್ನು ಪಾಲಿಸಿಕೊಂಡು ಎಂದಿನಂತೆ ಕಂಬಳ ಕ್ರೀಡೆ ಆಯೋಜಿಸಲಾಗಿದೆ. ಕೂಟದಲ್ಲಿ ವಿವಿಧ ವಿಭಾಗಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಜತೆ ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉದ್ಘಾಟನಾ ಕಾರ್ಯಕ್ರಮ

ಅಂದು ಬೆಳಗ್ಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹರಿದಾಸ್ ಭಟ್, ಮಿಯ್ಯಾರು ಚರ್ಚ್‍ನ ಧರ್ಮ ಗುರು ವಂದನೀಯ ರೆ.ಫಾ. ಪಾವುಲ್ ರೇಗೋ, ಜಾಮೀಯ ಮಸೀದಿ ಧರ್ಮ ಗುರು ಇ. ಅಬ್ದುಲ್ ರಶೀದ್, ಭಾಸ್ಕರ್ ಎಸ್. ಕೋಟ್ಯಾನ್, ಕಾರ್ಯಾಧ್ಯಕ್ಷ ಜೀವನ್‍ದಾಸ್ ಅಡ್ಯಂತಾಯ ಮೊದಲಾದವರು ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ, ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್, ಸಂಸದೆ ಶೋಭಾ ಕರಂದ್ಲಾಜೆ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯ್ಲಿ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‍ನ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಸೇರಿದಂತೆ ವಿವಿಧ ಕ್ಷೇತ್ರದ ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪ್ರಧಾನ ತೀರ್ಪುಗಾರ ಗುಣಪಾಲ ಕಡಂಬರ ಮಾರ್ಗದರ್ಶನ ದಲ್ಲಿ ಕಂಬಳದ ಯಶಸ್ಸಿನ ಕಾರ್ಯ ನಿರ್ವಹಣೆಗೆ ಬೇರೆ ಬೇರೆ ತಂಡಗಳನ್ನು ರಚಿಸಲಾಗಿದೆ ಎಂದು ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಸನ್ಮಾನ

ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕರ್ನಾಟಕ ಕ್ರೀಡಾ ರತ್ನ ಪುರಸ್ಕೃತ ಸುರತ್ಕಲ್ ಗೋಪಾಲ ಕೃಷ್ಣ ಪ್ರಭು, ಓಟಗಾರರಾದ ಮಿಜಾರು ಶ್ರೀನಿವಾಸ ಗೌಡ, ಹಕ್ಕೇರಿ ಸುರೇಶ್ ಶೆಟ್ಟಿ ಮತ್ತು ಪಣಪೀಲು ಪ್ರವೀಣ್ ಕೋಟ್ಯಾನ್‍ರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News