×
Ad

ಉಪ್ಪಿನಂಗಡಿ: ಬಸ್‍ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ; ಆರೋಪಿ ಸೆರೆ

Update: 2021-02-23 23:09 IST

ಉಪ್ಪಿನಂಗಡಿ: ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕಮಗಳೂರು ನಿವಾಸಿ ಸೈಪುಲ್ಲಾ (32) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್‍ನಲ್ಲಿ ಈ ಘಟನೆ ನಡೆದಿದ್ದು, ಈತ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಮೈ ಮುಟ್ಟಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಇದನ್ನು ಆಕ್ಷೇಪಿಸಿದ ವಿದ್ಯಾರ್ಥಿನಿ ಈ ಬಗ್ಗೆ ಬಸ್ಸಿನ ನಿರ್ವಾಹಕರಿಗೆ ದೂರು ನೀಡಿದ್ದು, ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಲು ನೆರವಾದರು. ಉಪ್ಪಿನಂಗಡಿ ಪೊಲೀಸರು ಕಿರುಕುಳಕ್ಕೊಳಗಾದ ವಿದ್ಯಾರ್ಥಿನಿಯ ದೂರನ್ನು ಸ್ವೀಕರಿಸಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News