ಮುಂಬೈ: ಮಾಸ್ಕ್‌ ಧರಿಸದ ವ್ಯಕ್ತಿಗಳಿಂದ ಒಂದೇ ದಿನದಲ್ಲಿ 45ಲಕ್ಷ ರೂ. ದಂಡ ಸಂಗ್ರಹಿಸಿದ ಪೊಲೀಸರು

Update: 2021-02-24 06:53 GMT

ಮುಂಬೈ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ಮುಂಬೈ ನಾಗರಿಕರಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ, ಇದನ್ನು ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಸಂಗ್ರಹಿಸಿದ ದಂಡದ ಮೊತ್ತದಲ್ಲೂ ಏರಿಕೆ ಕಂಡಿದೆ ಎಂದು ತಿಳಿದು ಬಂದಿದೆ.

ಸೋಮವಾರ ಪೊಲೀಸರು, ಬಿಎಂಸಿ, ಪಶ್ಚಿಮ ರೈಲ್ವೆ ಮತ್ತು ಕೇಂದ್ರ ರೈಲ್ವೆಯು ಮಾಸ್ಕ್‌ ಧರಿಸದ 22,976 ಜನರಿಂದ ಸುಮಾರು 45 ಲಕ್ಷ ರೂ. ದಂಡ ಸಂಗ್ರಹಿಸಿದೆ. ರವಿವಾರ 14,100 ಜನರಿಗೆ ಒಟ್ಟು 28 ಲಕ್ಷ ರೂ.ಗಳ ದಂಡ ವಿಧಿಸಲಾಗಿದ್ದು, ಶನಿವಾರ 16,154 ಮಾಸ್ಕ್‌ ಧರಿಸದ ವ್ಯಕ್ತಿಗಳಿಂದ 32 ಲಕ್ಷ ರೂ. ಸಂಗ್ರಹಿಸಲಾಗಿದೆ ಎಂದು ತಿಳಿದು ಬಂದಿದೆ.

ವಾರಾಂತ್ಯದಲ್ಲಿ ಕೇವಲ ಬಿಎಂಸಿಯು 60 ಲಕ್ಷ ರೂ. ದಂಡವನ್ನು ಸಂಗ್ರಹಿಸಿದೆ. ಮಾರ್ಚ್ 2020 ರಿಂದ, ಇದುವರೆಗೆ 15 ಲಕ್ಷಕ್ಕೂ ಹೆಚ್ಚು ಮಾಸ್ಕ್‌ ಧರಿಸದ ಮುಂಬೈ ನಾಗರಿಕರನ್ನು ಪೊಲೀಸರು ಪತ್ತೆಹಚ್ಚಿ ದಂಡ ವಿಧಿಸಿದ್ದಾರೆ ಮತ್ತು 30.5 ಕೋಟಿ ರೂ. ದಂಡವನ್ನು ಪಾವತಿಸಲಾಗಿದೆ. ದಂಡ ಪಾವತಿಸಲು ಸಾಧ್ಯವಾಗದಿದ್ದರೆ ರಸ್ತೆ ಗುಡಿಸುವಂತಹ ಸಮುದಾಯ ಸೇವೆಗಳನ್ನು ಸಹ ಮಾಡಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News