ಉಡುಪಿ ಜಿಲ್ಲೆಯ 7 ಮಂದಿ ಕೊರೋನ ಸೋಂಕಿಗೆ ಪಾಸಿಟಿವ್

Update: 2021-02-24 13:48 GMT

ಉಡುಪಿ, ಫೆ.24: ಜಿಲ್ಲೆಯ ಏಳು ಮಂದಿ ಬುಧವಾರ ಕೊರೋನ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ನಾಲ್ವರು ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 63ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ಐದು ಮಂದಿ ಪುರುಷರು ಹಾಗೂ ಇಬ್ಬರು ಮಹಿಳೆ ಯರಾಗಿದ್ದಾರೆ. ಇವರಲ್ಲಿ ಐವರು ಉಡುಪಿ ತಾಲೂಕಿನವರಾದರೆ, ಇಬ್ಬರು ಕುಂದಾಪುರ, ತಾಲೂಕಿನವರು. ಎಲ್ಲಾ ಏಳು ಮಂದಿ ಹೋಮ್ ಐಸೋಲೇಷನ್‌ನಲ್ಲೇ ಚಿಕಿತ್ಸೆ ಪಡೆಯುತಿದ್ದಾರೆ. ಮಂಗಳವಾರ 4 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿ ಕೊಂಡವರ ಸಂಖ್ಯೆ ಈಗ 23,305ಕ್ಕೇರಿದೆ.

1329 ಮಂದಿ ನೆಗೆಟಿವ್: ಮಂಗಳವಾರ ಜಿಲ್ಲೆಯ 1336 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1329 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ ಏಳು ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,557 ಆಗಿದೆ ಎಂದು ಡಾ.ಸೂಡ ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,61,742 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 3,38,185 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ಗೆ (ಒಟ್ಟು ಬಲಿ 189) ಯಾರೂ ಬಲಿಯಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News