‘ಪೊಗರು’ ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನ ಆರೋಪ: ಕ್ಷಮೆಯಾಚಿಸಿದ ನಾಯಕ ನಟ ಧ್ರುವ ಸರ್ಜಾ

Update: 2021-02-24 14:41 GMT

ಬೆಂಗಳೂರು, ಫೆ.24: ಇತ್ತೀಚಿಗೆ ತೆರೆ ಕಂಡ ‘ಪೊಗರು’ ಕನ್ನಡ ಸಿನೆಮಾದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಾಯಕ ನಟ ಧ್ರುವ ಸರ್ಜಾ ಕ್ಷಮೆ ಕೋರಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಅವರು, 'ಚಿತ್ರದ ಕತೆ, ಪಾತ್ರ ಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ನೋವಾಗಿದೆ ಎನ್ನುವಂತಹ ಮಾತು ನಿಜಕ್ಕೂ ನಮ್ಮ ತಂಡಕ್ಕೆ ಬೇಸರ ತಂದಿದೆ. ಈ ಕಾರಣಕ್ಕಾಗಿಯೇ ಬೇಷರತ್ ಕ್ಷಮೆ ಕೇಳುತ್ತೇನೆ' ಎಂದು ತಿಳಿಸಿದ್ದಾರೆ.

''ನಮ್ಮ ಇಡೀ ಕುಟುಂಬ ಹನುಮಭಕ್ತರು. ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ಧತಿಯನ್ನು ಆಚರಿಸುತ್ತಾ, ಗೌರವಿಸುತ್ತಾ ಬದುಕುತ್ತಿದ್ದೇವೆ. ತಾತನವರ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿಯೇ ಬದುಕಿದ್ದೇವೆ. ಕಲೆಯೇ ಧರ್ಮ, ನಾವು ಎಲ್ಲ ಧರ್ಮಗಳನ್ನು ಗೌರವಿಸಿದ್ದೇವೆ. ಚಿತ್ರದ ಕತೆ, ಪಾತ್ರ ಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ನೋವಾಗಿದೆ ಎನ್ನುವಂತಹ ಮಾತು ನಿಜಕ್ಕೂ ನಮ್ಮ ತಂಡಕ್ಕೆ ಬೇಸರ ತಂದಿದೆ. ಈ ಕಾರಣಕ್ಕಾಗಿಯೇ ಬೇಷರತ್ ಕ್ಷಮೆ ಕೇಳುತ್ತೇನೆ. ನನ್ನ ಮನವಿಯನ್ನು ಪುರಸ್ಕರಿಸಿ, ಎಂದಿನಂತೆ ನಿಮ್ಮ ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News