ಸಿಎಫ್‌ಐ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಭೆ

Update: 2021-02-24 14:59 GMT

ಉಡುಪಿ, ಫೆ.24: ಪ್ರಸಕ್ತ ಸನ್ನಿವೇಶದಲ್ಲಿ ದೇಶಕ್ಕೆ ವಿದ್ಯಾರ್ಥಿ ಹೋರಾಟದ ಅಗತ್ಯತೆ ಇದ್ದು ವಿದ್ಯಾರ್ಥಿಗಳನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಗಳಲ್ಲಿ ಸಂಘಟಿಸಬೇಕಾದ ಜವಾಬ್ದಾರಿಯಿದೆ. ಅಲ್ಲದೆ ಫ್ಯಾಶಿಸ್ಟ್ ಶಕ್ತಿಯನ್ನು ಪ್ರಜಾ ಪ್ರಭುತ್ವವಾಗಿ ಎದುರಿಸಲು ವಿದ್ಯಾರ್ಥಿಗಳನ್ನು ಅಣಿಗೊಳಿಸ ಬೇಕು ಎಂದು ಸಿಎಫ್‌ಐ ಕರ್ನಾಟಕ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ ಹೇಳಿದ್ದಾರೆ.

ಇಂದು ಉಡುಪಿಯಲ್ಲಿ ನಡೆದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ಇದರ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಅಭಿನಂದನಾ ಸಭೆಯಲ್ಲಿ ಅವರು ಮಾತನಾಡುತಿದ್ದರು.

ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ, ರಾಜ್ಯ ಕಾರ್ಯದರ್ಶಿ ಸರ್ಫರಾಝ್ ಗಂಗಾವತಿ, ರಾಜ್ಯ ಮುಖಂಡರಾದ ಅಷ್ವಾನ್ ಸಾಧಿಕ್ ಅವರನ್ನು ಸನ್ಮಾನಿಸಲಾಯಿತು. ಉಡುಪಿ ಸಿಎಫ್‌ಐ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ, ಜಿಲ್ಲಾ ಸಮಿತಿ ಸದಸ್ಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ಅನ್ನಾನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News