ಝಹೀರ್ ಖಾನ್ ದಾಖಲೆ ಹಿಂದಿಕ್ಕಿದ ಅಶ್ವಿನ್

Update: 2021-02-24 15:45 GMT

ಅಹ್ಮದಾಬಾದ್:  ಭಾರತದ ಆಫ್-ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬುಧವಾರ ಒಟ್ಟು 599 ಅಂತರ್ ರಾಷ್ಟ್ರೀಯ ವಿಕೆಟ್ ಗಳನ್ನು ಪಡೆಯುವುದರೊಂದಿಗೆ ಝಹೀರ್ ಖಾನ್ ಅವರ ದಾಖಲೆಯನ್ನು(597 ವಿಕೆಟ್) ಹಿಂದಿಕ್ಕಿದರು. ಈ ಮೂಲಕ ಅಂತರ್ ರಾಷ್ಟ್ರೀಯ ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ಪಡೆದ ಭಾರತೀಯ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದರು.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬುಧವಾರ 28ನೇ ಓವರ್ ನಲ್ಲಿ ಇಂಗ್ಲೆಂಡ್ ಕ್ರಿಕೆಟಿಗ ಒಲ್ಲಿ ಪೋಪ್ ರನ್ನು ಪೆವಿಲಿಯನ್ ಗೆ ಅಟ್ಟಿದ ಅಶ್ವಿನ್ ಅವರು ಝಹೀರ್ ಖಾನ್ ದಾಖಲೆಯನ್ನು ಮುರಿದು ಮುನ್ನುಗ್ಗಿದರು. ಅಶ್ವಿನ್ ಇದೀಗ ಎಲ್ಲ 3 ಪ್ರಕಾರದ  ಕ್ರಿಕೆಟ್ ನಲ್ಲಿ ಒಟ್ಟು 599 ವಿಕೆಟ್ ಗಳನ್ನು ಪಡೆದಿದ್ದಾರೆ. ಮಾಜಿ ನಾಯಕ ಅನಿಲ್ ಕುಂಬ್ಳೆ(953), ಸ್ಪಿನ್ನರ್ ಹರ್ಭಜನ್ ಸಿಂಗ್ (707) ಹಾಗೂ ಕಪಿಲ್ ದೇವ್ (687) ಅಂತರ್ ರಾಷ್ಟ್ರೀಯ ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ಪಡೆದಿರುವ ಭಾರತೀಯರ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನದಲ್ಲಿದ್ದಾರೆ.

ಆಫ್  ಸ್ಪಿನ್ನರ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ಒಟ್ಟು 400 ವಿಕೆಟ್ ಗಳನ್ನು ಪಡೆದಿರುವ ಭಾರತದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗುವ ಹೊಸ್ತಿಲಲ್ಲಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಈ ಸಾಧನೆ ಮಾಡಲು ಅಶ್ವಿನ್ ಗೆ ಇನ್ನು ಕೇವಲ 3 ವಿಕೆಟ್ ಗಳ ಅಗತ್ಯವಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News