ದ.ಕ.ಜಿಲ್ಲೆ : 9 ಮಂದಿಗೆ ಕೊರೋನ ಸೋಂಕು

Update: 2021-02-24 15:52 GMT

ಮಂಗಳೂರು, ಫೆ. 24: ದ.ಕ. ಜಿಲ್ಲೆಯಲ್ಲಿ ಬುಧವಾರ 9 ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಯಾವುದೇ ಕೋವಿಡ್ ಸಾವು ಸಂಭವಿಸಿಲ್ಲ. 17 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಸಂಖ್ಯೆ 34,350ಕ್ಕೆ ಏರಿಕೆಯಾಗಿದ್ದು, 33,407 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸಂಭವಿಸಿದ ಕೋವಿಡ್ ಸಾವು 740 ಆಗಿದೆ. ಪ್ರಸಕ್ತ 203 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದ 33,822 ಪ್ರಕರಣಗಳಲ್ಲಿ ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News