×
Ad

ಮಂಗಳೂರು ಘನತ್ಯಾಜ್ಯ ಭೂ ಭರ್ತಿ ಘಟಕ ಕುಸಿತ: ಭೂಮಿ ಸ್ವಾಧೀನಕ್ಕೆ ಕಾಲಾವಕಾಶ ನೀಡಿದ ಹೈಕೋರ್ಟ್

Update: 2021-02-24 23:31 IST

ಬೆಂಗಳೂರು, ಫೆ.24: ಮಂಗಳೂರು ನಗರದ ಪಚ್ಚನಾಡಿ, ಕುಡುಪು ಹಾಗೂ ಮಂದಾರ ಪ್ರದೇಶದಲ್ಲಿನ ಘನತ್ಯಾಜ್ಯ ಭೂ ಭರ್ತಿ ಘಟಕ ಕುಸಿದ ಪರಿಣಾಮ ಸುತ್ತಲೂ ತ್ಯಾಜ್ಯ ಬಿದ್ದಿರುವ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ 3 ವಾರ ಕಾಲಾವಕಾಶ ನೀಡಿದೆ.

ಈ ಕುರಿತು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ರಾಜ್ಯ ಸರಕಾರದ ಪರ ವಾದಿಸಿದ ವಕೀಲರು, ಜಮೀನು ಸ್ವಾಧೀನ ಪಡಿಸಿಕೊಳ್ಳುವ ಸಂಬಂಧ ಮಂಗಳೂರು ಮಹಾನಗರ ಪಾಲಿಕೆ ಇತ್ತೀಚೆಗಷ್ಟೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅಂತಿಮ ತೀರ್ಮಾನ ಕೈಗೊಳ್ಳಲು ಮೂರು ವಾರ ಕಾಲಾವಕಾಶ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ನ್ಯಾಯಪೀಠವು ಕಾಲಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News