ಕೆಎಸ್‌ಆರ್‌ಟಿಸಿ ಬಸ್- ಬೈಕ್ ಅಪಘಾತ: ಯೂತ್ ಕಾಂಗ್ರೆಸ್ ಕಾರ್ಯಕರ್ತ ಮೃತ್ಯು

Update: 2021-02-24 18:05 GMT

ಚಿಕ್ಕಮಗಳೂರು, ಫೆ.24: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಯೂತ್ ಕಾಂಗ್ರೆಸ್ ಘಟಕದ ಕಾರ್ಯಕರ್ತ ತರೀಕೆರೆ ತಾಲೂಕಿನ ನೇರಲಕೆರೆ ಗ್ರಾಮದ ಯುವಕ ಮಿಥುನ್ (23) ಸಾವನ್ನಪ್ಪಿರುವ ಘಟನೆ ಬುಧವಾರ ವರದಿಯಾಗಿದೆ.

ಬುಧವಾರ ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ತೆರಳುವ ವೇಳೆ ಬಸ್ ಹಾಗೂ ಬೈಕ್ ನಡುವೆ ಸಂತವೇರಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಗಾಯಾಳುವನ್ನು ನಗರದ ಜಿಲ್ಲಾಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ. ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಕಾಂಗ್ರೆಸ್ ಕಾರ್ಯಕರ್ತ ಮಿಥುನ್ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಅಂಶುಮಂತ್, ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ರೇಖಾಹುಲಿಯಪ್ಪಗೌಡ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜೇಗೌಡ ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News