ಭಾರತದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಬಿಜೆಪಿಗೆ ಸೇರ್ಪಡೆ

Update: 2021-02-25 06:11 GMT

ಕೋಲ್ಕತಾ: ಭಾರತದ ಮಾಜಿ ಕ್ರಿಕೆಟಿಗ ಅಶೋಕ್ ದಿಂಡಾ ಬುಧವಾರ ಕೋಲ್ಕತಾದಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಸೇರ್ಪಡೆಯಾದರು.

ಕೋಲ್ಕತಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರ್ಜುನ್ ಸಿಂಗ್ ಉಪಸ್ಥಿತಿಯಲ್ಲಿ ದಿಂಡಾ ಬಿಜೆಪಿಗೆ ಸೇರಿದರು.

ವೇಗದ ಬೌಲರ್ ಆಗಿದ್ದ ಅಶೋಕ್ ದಿಂಡಾ ಇತ್ತೀಚೆಗಷ್ಟೇ ಎಲ್ಲ ಮಾದರಿಯ ಕ್ರಿಕೆಟಿನಿಂದ ನಿವೃತ್ತಿಯಾಗಿದ್ದರು. ಅಶೋಕ್ ಭಾರತವನ್ನು 13 ಏಕದಿನ ಹಾಗೂ 9 ಟಿ-20 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದು,ಕ್ರಮವಾಗಿ 12 ಹಾಗೂ 17 ವಿಕೆಟ್ ಗಳನ್ನು ಪಡೆದಿದ್ದಾರೆ.

ಪಶ್ಚಿಮಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಕಾರಣ ಅಶೋಕ್ ದಿಂಡಾ ಬಿಜೆಪಿ ಸೇರಿದ್ದಾರೆ. ಇತ್ತೀಚೆಗಷ್ಟೇ ಭಾರತದ ಕ್ರಿಕೆಟಿಗ ಮನೋಜ್ ತಿವಾರಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ)ಪಕ್ಷವನ್ನು ಸೇರಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News