ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ

Update: 2021-02-25 14:00 GMT
ರಾಮಲಿಂಗಾರೆಡ್ಡಿ / ಸಲೀಂ ಅಹ್ಮದ್‍

ಬೆಂಗಳೂರು, ಫೆ. 25: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಆರ್.ಧ್ರುವನಾರಾಯಣ್ ಹಾಗೂ ಸಲೀಂ ಅಹ್ಮದ್ ಅವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಮತ್ತು ಪಕ್ಷದ ಹೊಣೆಯನ್ನು ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ರಾಮಲಿಂಗಾರೆಡ್ಡಿ: ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಉತ್ತರ, ಕೇಂದ್ರ, ರಾಜ್ಯ ಮಹಿಳಾ ಕಾಂಗ್ರೆಸ್ ಘಟಕ ಮತ್ತು ಪಕ್ಷದ ಆಸ್ತಿ ಮತ್ತು ಸ್ವತ್ತುಗಳ ಸಮಿತಿ ಹೊಣೆಯನ್ನು ರಾಮಲಿಂಗಾರೆಡ್ಡಿ ಅವರಿಗೆ ನೀಡಲಾಗಿದೆ.

ಈಶ್ವರ್ ಖಂಡ್ರೆ: ಕಲಬುರಗಿ, ಯಾದಗಿರಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ ಹಾಗೂ ಬಳ್ಳಾರಿ ಗ್ರಾಮಾಂತರ ಜಿಲ್ಲೆ, ಜೊತೆಗೆ ರಾಜ್ಯ ಕಿಸಾನ್ ಕಾಂಗ್ರೆಸ್ ಹೊಣೆಯನ್ನು ಈಶ್ವರ್ ಖಂಡ್ರೆ ಅವರಿಗೆ ವಹಿಸಲಾಗಿದೆ.

ಸತೀಶ್ ಜಾರಕಿಹೊಳಿ: ಚಿಕ್ಕೋಡಿ, ಬೆಳಗಾವಿ ನಗರ, ಗ್ರಾಮಾಂತರ, ಬಾಗಲಕೋಟೆ, ವಿಜಯಪುರ, ಧಾರವಾಡ ಗ್ರಾಮಾಂತರ, ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಪಕ್ಷದ ತರಬೇತಿ ಮತ್ತು ಕಾರ್ಯಾಗಾರಗಳ ಜವಾಬ್ದಾರಿಯನ್ನ ಸತೀಶ್ ಜಾರಕಿಹೊಳಿ ಅವರಿಗೆ ವಹಿಸಲಾಗಿದೆ.

ಆರ್.ಧ್ರುವನಾರಾಯಣ್: ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಗ್ರಾಮಾಂತರ, ನಗರ, ಕೊಡಗು, ಚಾಮರಾಜನಗರ ಹಾಗೂ ಪಕ್ಷದ ವಿದ್ಯಾರ್ಥಿ ಘಟಕ(ಎನ್‍ಎಸ್‍ಯುಐ) ಹೊಣೆಗಾರಿಕೆಯನ್ನು ಆರ್.ಧ್ರುವನಾರಾಯಣ್ ಅವರಿಗೆ ವಹಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸಲೀಂ ಅಹ್ಮದ್: ದಕ್ಷಿಣ ಕನ್ನಡ, ಗದಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆ ಜೊತೆಗೆ ಪಕ್ಷದ ಸಂಘಟನೆ ಮತ್ತು ಆಡಳಿತ, ರಾಜ್ಯ ಸೇವಾದಳ ಘಟಕದ ಹೊಣೆಯನ್ನು ಸಲೀಂ ಅಹ್ಮದ್ ಅವರಿಗೆ ವಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News