ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ
Update: 2021-02-25 22:55 IST
ಹೊಸದಿಲ್ಲಿ: ಕೆಲವು ದಿನಗಳ ಹಿಂದೆ ವಿ.ನಾರಾಯಣ ಸ್ವಾಮಿ ನೇತೃತ್ವದ ಕಾಂಗ್ರೆಸ್ ಸರಕಾರ ಬಹುಮತ ಕಳೆದುಕೊಂಡ ಬಳಿಕ ಗುರುವಾರ ಪುದುಚೇರಿ ಯಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗಿದೆ.
ಫೆ.22ರಂದು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಆಡಳಿತಾಧಿಕಾರಿಯಿಂದ ರಾಷ್ಟ್ರಪತಿ ವರದಿ ಸ್ವೀಕರಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಇರುವ ಅಧಿಸೂಚನೆಯಲ್ಲಿ, ತಿಳಿಸಲಾಗಿದೆ.
ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಡಿಎಂಕೆ ಶಾಸಕ ಇತ್ತೀಚೆಗೆ ರಾಜೀನಾಮೆ ನೀಡಿದ ಬಳಿಕ ಪುದುಚೇರಿಯಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರ ಸೋಮವಾರ ಪತನಗೊಂಡಿದ್ದು, ಮುಖ್ಯಮಂತ್ರಿ ನಾರಾಯಣ ಸ್ವಾಮಿ ಬಹುಮತ ಸಾಬೀತಿಗೆ ಮೊದಲೇ ತಮ್ಮಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.