ಗದಗ: ಟ್ರ್ಯಾಕ್ಟರ್ ಪಲ್ಟಿ; ಇಬ್ಬರು ಮೃತ್ಯು

Update: 2021-02-25 17:43 GMT

ಗದಗ, ಫೆ.25: ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ ಹಿತ್ತಲಮನಿ(40) ಮತ್ತು ಸೋಮವ್ವಾ ಅಡುಗೆಮನಿ(48) ಸಾವನ್ನಪ್ಪಿದ್ದು, ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೂಲಿ ಕೆಲಸ ಮುಗಿಸಿಕೊಂಡು ವಾಪಸ್ ಬರುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ರಸ್ತೆ ಬದಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಸದ್ಯ ಗಾಯಾಳುಗಳನ್ನ ಲಕ್ಷ್ಮೇಶ್ವರ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News