ಮಾಣಿ ಗ್ರಾಪಂನಲ್ಲಿ ಮಕ್ಕಳ ಗ್ರಾಮ ಸಭೆ

Update: 2021-02-26 10:04 GMT

ವಿಟ್ಲ, ಫೆ.26: ಸ್ವಚ್ಛತೆ ಮಕ್ಕಳಿಂದ ಸಾಧ್ಯ, ಮಕ್ಕಳು ಪ್ರಯತ್ನಿಸಿದರೆ ತಮ್ಮ ಮನೆ, ಶಾಲೆಯೊಂದಿಗೆ ಪರಿಸರವನ್ನೂ ಸ್ವಚ್ಛವಾಗಿ ಇಟ್ಟುಕೊಳ್ಳಬಹುದು ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಮಕ್ಕಳಿಗೆ ಕಿವಿಮಾತು ಹೇಳಿದ್ದಾರೆ.

 ಮಾಣಿ ಗ್ರಾಮ ಪಂಚಾಯತ್ ನಲ್ಲಿ ಜರುಗಿದ ಮಕ್ಕಳ ಗ್ರಾಮಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ರೋಹಿಣಿ ಮತ್ತು ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್  ಇಲಾಖೆಗಳಿಗೆ ಸಂಬಂಧಪಟ್ಟ ಮಾಹಿತಿಗಳನ್ನು ನೀಡಿದರು.

ವಿವಿಧ ಶಾಲೆಗಳಿಂದ ಆಗಮಿಸಿದ ಮಕ್ಕಳು ಹಲವು ಬೇಡಿಕೆಗಳೊಂದಿಗೆ ತಮ್ಮ ಅಹವಾಲುಗಳನ್ನು ಮಂಡಿಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರ, ಪಂಚಾಯತ್ ಸದಸ್ಯರುಗಳಾದ ಇಬ್ರಾಹೀಂ ಕೆ. ಮಾಣಿ, ರಮಣಿ, ನಾರಾಯಣ ಶೆಟ್ಟಿ ತೋಟ, ಸೀತಾ, ಸುಜಾತಾ, ಮಿತ್ರಾಕ್ಷಿ ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News