ಕೆಎಸ್‌ಆರ್‌ಟಿಸಿ: ಮಾ.31ರವರೆಗೆ ಹಳೆಯ ಪಾಸ್ ತೋರಿಸಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ

Update: 2021-02-26 12:36 GMT

ಬೆಂಗಳೂರು, ಫೆ.26: ಶಾಲಾ-ಕಾಲೇಜು ಪುನರಾರಂಭದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‍ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳು 2019-20ನೇ ಸಾಲಿನ ಪಾಸ್ ತೋರಿಸಿ 2021ರ ಮಾರ್ಚ್ 31ರ ವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಫೆ.28ರ ವರೆಗೆ ಹಳೆಯ ಪಾಸ್ ತೋರಿಸಿ ಪ್ರಯಾಣಿಸಲು ಅವಕಾಶ ನೀಡಿದ್ದು, ಇದೀಗ ಆ ಅವಧಿಯನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಹಳೆಯ ಪಾಸಿನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ-ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಸೀದಿಯನ್ನು ತೋರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News