6ನೆ ದಿನಕ್ಕೆ ಕಾಲಿಟ್ಟ ಪಂಚಮಸಾಲಿ ಮೀಸಲಾತಿ ಹೋರಾಟ

Update: 2021-02-26 14:46 GMT

ಬೆಂಗಳೂರು, ಫೆ.26: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ `2ಎ' ಮೀಸಲಾತಿಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಧರಣಿ ಶುಕ್ರವಾರ 6 ದಿನಕ್ಕೆ ಕಾಲಿಟ್ಟಿದೆ.

ಮಾ.4ರವರೆಗೆ ಧರಣಿ ನಡೆಸಲು ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಫೆ.25ರಂದು ನಡೆದ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಾರೆ. 

ಪಂಚಮಸಾಲಿಗೆ ಸದ್ಯಕ್ಕೆ 2ಎ ಮೀಸಲಾತಿ ಇಲ್ಲ ಎಂದು ಸರಕಾರ ಪರೋಕ್ಷವಾಗಿ ತಿಳಿಸಿದ್ದು, ಹೋರಾಟ ತೀವ್ರಗೊಳಿಸುವ ಸಾಧ್ಯತೆ ಇದೆ. ರಾಜ್ಯ ಸರಕಾರದಿಂದ ಶ್ರೀಗಳಿಗೆ ಸಂದೇಶ ರವಾನೆಯಾಗಿದ್ದು, ನಾವು ಮೀಸಲಾತಿ ತೆಗೆದುಕೊಂಡೇ ಹೋಗುತ್ತೇವೆ ಎಂದು ಪಟ್ಟುಹಿಡಿದಿದ್ದಾರೆ.

ಮಾರ್ಚ್ 4ರವರೆಗೆ ಧರಣಿ ಮಾಡುತ್ತೇವೆ. ಬಳಿಕ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಟೊಂಕಕಟ್ಟಿ ನಿಂತಿದ್ದಾರೆ. ಮಾ.4ರ ಸಂಜೆ ಮತ್ತೆ ಸಲಹಾ ಸಮಿತಿ ಸಭೆ ನಡೆಸಿ ಮುಂದಿನ ನಿರ್ಧಾರ ಬಗ್ಗೆ ಚಿಂತನೆ ನಡೆಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಸರಕಾರದವರು ಧರಣಿ ಸ್ಥಳಕ್ಕೆ ಬಂದು ನಮ್ಮ ಜೊತೆ ಮಾತುಕತೆ ನಡೆಸಲಿ ಎಂದು ರಾಜ್ಯ ಸರಕಾರಕ್ಕೆ ಪಂಚಮಸಾಲಿ ಸಮುದಾಯದ ಜನರು ಒಕ್ಕೂರಲಿನಿಂದ ಒತ್ತಾಯಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News