ಸರಕಾರಿ ವೈದ್ಯಕೀಯ ಕಾಲೇಜು ಮಂಜೂರು: ಸಿಎಫ್‌ಐ ಮನವಿ

Update: 2021-02-26 14:54 GMT

ಉಡುಪಿ, ಫೆ.26: ಉಡುಪಿ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿನ ಅಗತ್ಯತೆಯ ಕುರಿತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ಇಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದೆ.

ಹಲವು ವರ್ಷಗಳಿಂದ ಉಡುಪಿ ಜಿಲ್ಲೆಯ ಜನರ ಬೇಡಿಕೆ ಆಗಿರುವ ಸರಕಾರಿ ವೈದ್ಯಕೀಯ ಕಾಲೇಜು ಇನ್ನೂ ಕೂಡ ಸ್ಥಾಪನೆಗೊಂಡಿಲ್ಲ. ಬುದ್ಧಿವಂತರ ಜಿಲ್ಲೆ ಎನಿಸಿಕೊಂಡ ಉಡುಪಿಯಲ್ಲಿ ಒಂದೇ ಒಂದು ಸರಕಾರಿ ವೈದ್ಯಕೀಯ ಕಾಲೇಜು ಇಲ್ಲದಿರುವುದು ವಿಪರ್ಯಾಸ. ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಬೇರೆ ಬೇರೆ ಜಿಲ್ಲೆಗಳಲ್ಲಿ ಹೋಗಬೇಕಾಗಿದೆ. ಜಿಲ್ಲೆಯ ಬಡ ವಿದ್ಯಾರ್ಥಿಗಳು ಇಲ್ಲಿಯ ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಪಡೆಯು ವುದು ಅಸಾಧ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆದುದರಿಂದ ಸರಕಾರ ಮಾ.8 ಬಜೆಟ್ ಅಧಿವೇಶನದಲ್ಲಿ ಈ ವಿಷಯವನ್ನು ಉಲ್ಲೇಖಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭ ದಲ್ಲಿ ಸಿಎಫ್‌ಐ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್, ಪ್ರಧಾನ ಕಾರ್ಯ ದರ್ಶಿ ಮಸೂದ್ ಮನ್ನಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News