ಕುಡಿಯುವ ನೀರಿನ ಘಟಕ ಅಳವಡಿಕೆಯಲ್ಲಿ ಅವ್ಯವಹಾರ ಆರೋಪ: ಅರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಜಂಟಿ ಸದನ ಸಮಿತಿ ರಚನೆ

Update: 2021-02-26 17:43 GMT

ಬೆಂಗಳೂರು, ಫೆ.26: ರಾಜ್ಯದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ವಿಚಾರದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತಂತೆ ವಿಚಾರಣೆ ನಡೆಸಿ ವರದಿಯನ್ನು ನೀಡಲು ವಿಧಾನಪರಿಷತ್ತಿನ ಸಭಾಪತಿಯ ಸಹಮತಿಯೊಂದಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಜಂಟಿ ಸದನ ಸಮಿತಿಯನ್ನು ರಚಿಸಿದ್ದು, ಜೂ.30ರೊಳಗೆ ವರದಿಯನ್ನು ಸಲ್ಲಿಸುವಂತೆ ತಿಳಿಯಪಡಿಸಲಾಗಿದೆ.

ಅರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯಲ್ಲಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಎ.ಎಸ್.ಪಾಟೀಲ್ ನಡಹಳ್ಳಿ, ವೀರಣ್ಣ ಚರಂತಿಮಠ್, ಕೆ.ಶಿವನಗೌಡ ನಾಯಕ್, ಬಿ.ಸಿ.ನಾಗೇಶ್, ಪಿ.ರಾಜೀವ್, ಆಚಾರ್ ಹಾಲಪ್ಪ ಬಸಪ್ಪ, ಯು.ರಾಜೇಶ್ ನಾಯ್ಕ್, ಕೆ.ಜೆ.ಜಾರ್ಜ್, ಕೃಷ್ಣಭೈರೇಗೌಡ, ಯು.ಟಿ.ಖಾದರ್, ಈಶ್ವರ್ ಖಂಡ್ರೆ, ಎ.ಟಿ.ರಾಮಸ್ವಾಮಿ, ವೆಂಕಟರಾವ್ ನಾಡಗೌಡ, ವಿಧಾನಪರಿಷತ್ತಿನ ಸದಸ್ಯರಾದ ಎಸ್.ರವಿ, ವಿಜಯ್ ಸಿಂಗ್, ಎಚ್.ಎಂ.ರಮೇಶ್ ಗೌಡ, ಅ.ದೇವೇಗೌಡ ಹಾಗೂ ಎಸ್.ವಿ.ಸಂಕನೂರ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ರಾಜ್ಯ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News